Monday, July 27, 2026
spot_imgspot_img
spot_imgspot_img

ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ – ಗುಂಪಿನಿಂದ ಹಲ್ಲೆ, ವ್ಯಕ್ತಿ ಸಾವು!

- Advertisement -
- Advertisement -

ಚೆನ್ನೈ: ಕುಡಿದ ಮತ್ತಲ್ಲಿ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಕ್ಕೆ ಗುಂಪೊಂದು ವ್ಯಕ್ತಿಯನ್ನು ಥಳಿಸಿದ್ದು, ಪರಿಣಾಮ ವ್ಯಕ್ತಿ ಸಾವನ್ನಪ್ಪಿದ ಘಟನೆ ಚೆನ್ನೈನಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಕಲೈಸೆಲ್ವನ್( 30 ) ಎಂದು ಗುರುತಿಸಲಾಗಿದ್ದು, ಸ್ನೇಹಿತನೊಂದಿಗೆ ಆಟೋರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬುಧವಾರ (ಮಾ.11) ಮೃತ ವ್ಯಕ್ತಿ ಕುಡಿದ ಮತ್ತಿನಲ್ಲಿ ಸ್ನೇಹಿತನೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಆಟೋದಲ್ಲೇ ಕುಳಿತು ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ. ಇದರಿಂದ ಕಲೈಸೆಲ್ವನ್ ಹಾಗೂ ಮಹಿಳೆಯ ನಡುವೆ ವಾಗ್ವಾದ ಉಂಟಾಗಿದ್ದು, ಸ್ಥಳೀಯರು ಗಮನಿಸಿದ್ದಾರೆ.

ಸ್ಥಳಕ್ಕೆ ಬಂದ ಜನರು ಕಲೈಸೆಲ್ವನ್ ಮೇಲೆ ಹಲ್ಲೆ ನಡೆಸಿದ್ದು, ಪರಿಣಾಮ ಪ್ರಜ್ಞೆ ತಪ್ಪಿದೆ. ಕೂಡಲೇ ವ್ಯಕ್ತಿಯನ್ನು ಸ್ಟಾನ್ಲಿ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಯಿತು. ಆದರೆ ವೈದ್ಯರು ಸಾವನ್ನಪ್ಪಿರುವುದಾಗಿ ದೃಢಪಡಿಸಿದರು ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!