Monday, July 20, 2026
spot_imgspot_img
spot_imgspot_img

ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ – ಚಲಿಸುತ್ತಿದ್ದ ವಿಮಾನದಿಂದ ಹೊರಕ್ಕೆ ಜಿಗಿದ ಪ್ರಯಾಣಿಕ

- Advertisement -
- Advertisement -

ಚೆನ್ನೈ: ಫ್ಲೈಟ್‌ನಲ್ಲಿ 2 ಬಾರಿ ವಾಂತಿ ಮಾಡಿಕೊಂಡ ಪ್ರಯಾಣಿಕ, ಚೆನ್ನೈ ವಿಮಾನ ನಿಲ್ದಾಣದಲ್ಲಿ ಚಲಿಸುತ್ತಿದ್ದ ವಿಮಾನದ ತುರ್ತು ನಿರ್ಗಮನ ದ್ವಾರದಿಂದ ಹಾರಿರುವ ಘಟನೆ ನಡೆದಿದೆ.

ಇಂದು ಮುಂಜಾನೆ ಶಾರ್ಜಾ-ಚೆನ್ನೈ ಏರ್ ಅರೇಬಿಯಾ ವಿಮಾನವು ಚೆನ್ನೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದು ಮುಂದೆ ಚಲಿಸುತ್ತಿದ್ದಾಗ, ಪುರುಷ ಪ್ರಯಾಣಿಕನೊಬ್ಬ ತುರ್ತು ನಿರ್ಗಮನ ಬಾಗಿಲು ತೆರೆದು ಹೊರಗೆ ಹಾರಿದ್ದಾನೆ. ಇದನ್ನು ಕಂಡು ಇತರೆ ಪ್ರಯಾಣಿಕರು ಆಘಾತಕ್ಕೊಳಗಾದರು.

ವಿಮಾನವು ಮುಖ್ಯ ರನ್‌ವೇಯಿಂದ ಹೊರಬಂದು ಟ್ಯಾಕ್ಸಿವೇಯಲ್ಲಿ ನಿಧಾನವಾಗಿ ಚಲಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಈ ಘಟನೆ ಮುಖ್ಯ ರನ್‌ವೇಯಲ್ಲಿ ಸಂಭವಿಸಿಲ್ಲ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. ಪೈಲಟ್ ತಕ್ಷಣವೇ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದರು. ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಸಿಬ್ಬಂದಿ ತಕ್ಷಣ ವ್ಯಕ್ತಿಯನ್ನು ವಶಕ್ಕೆ ಪಡೆದರು. ನಂತರ ಹೆಚ್ಚಿನ ತನಿಖೆಗಾಗಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

ಈ ಘಟನೆಯಿಂದಾಗಿ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಸ್ವಲ್ಪ ಸಮಯ ಅಡ್ಡಿಯಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯ ರನ್‌ವೇಯನ್ನು ಮುಂಜಾನೆ 03:23 ರಿಂದ ಬೆಳಗ್ಗೆ 04:23 ರವರೆಗೆ ಮುಚ್ಚಲಾಯಿತು. ಆ ಅವಧಿಯಲ್ಲಿ ವಿಮಾನಗಳನ್ನು ದ್ವಿತೀಯ ರನ್‌ವೇಗೆ ತಿರುಗಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Related news

error: Content is protected !!