Sunday, April 28, 2024
spot_imgspot_img
spot_imgspot_img

ಕಾಸರಗೋಡು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಮೃತ್ಯು

- Advertisement -G L Acharya panikkar
- Advertisement -

ಕಾಸರಗೋಡು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಮೃತಪಟ್ಟ ಘಟನೆ ನಡೆದಿದೆ. ಆಲಂಪಾಡಿ ಮಡಕಮಟಿಲ್ ನಿವಾಸಿ ಮೊಹಮ್ಮದ್ ಯಾಸೀನ್ (19) ಮೃತ ಯುವಕ.

ಮೊಹಮ್ಮದ್ ಯಾಸೀನ್ ಚಲಾಯಿಸುತ್ತಿದ್ದ ಬೈಕ್ ಆಟೋ ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಯಾಸೀನ್ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರಜ್ಞಾಹೀನರಾಗಿದ್ದರು. ಬಳಿಕ ಕಾಸರಗೋಡಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು. ತಳಂಗರ ಕೆ.ಎಸ್. ಅಬ್ದುಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಶನಿವಾರ ಸಂಜೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!