Saturday, June 20, 2026
spot_imgspot_img
spot_imgspot_img

ಮಂಗಳೂರು: ಜೂಜಿನ ಕೋಳಿ ಅಂಕ ನಡೆಸಲು ಯಾವುದೇ ಅವಕಾಶವಿಲ್ಲ – ದ.ಕ ಎಸ್.ಪಿ ಸೂಚನೆ

- Advertisement -
- Advertisement -

ಮಂಗಳೂರು: ಜೂಜಿನ ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸಲು ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ದ.ಕ. ಎಸ್ ಪಿ ಸಿಬಿ ರಿಷ್ಯಂತ್ ತಿಳಿಸಿದ್ದಾರೆ.

ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದರು. ಇನ್ನು ಮುಂಬರುವ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

- Advertisement -

Related news

error: Content is protected !!