Saturday, April 27, 2024
spot_imgspot_img
spot_imgspot_img

ನವಜಾತ ಶಿಶುವೊಂದನ್ನು ನೇಣು ಹಾಕಿ ಕೊಂದ ಪಾಪಿ ತಾಯಿ!

- Advertisement -G L Acharya panikkar
- Advertisement -

ಚಿಕ್ಕಬಳ್ಳಾಪುರ: ಆಸ್ಪತ್ರೆಯ ಬಚ್ಚಲು ಕೋಣೆಯ ಕಿಟಕಿಗೆ ನವಜಾತ ಶಿಶುವೊಂದನ್ನು ನೇಣು ಹಾಕಿ ಕೊಂದಿರುವ ಘಟನೆ ಚಿಕ್ಕಬಳ್ಳಾಪುರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.

ಆಸ್ಪತ್ರೆಯ ಸಿಬ್ಬಂದಿ ಬೆಳಗ್ಗೆ 8 ಗಂಟೆ ಸಮಯದಲ್ಲಿ ಆಸ್ಪತ್ರೆಯನ್ನು ಸ್ವಚ್ಚಗೊಳಿಸುತ್ತಿದ್ದಾಗ ಬಚ್ಚಲಿನ ಬಾಗಿಲು ಬಂದ್​ ಆಗಿತ್ತು. ಸ್ವಚ್ಚಗೊಳಿಸಲೆಂದು ಎರಡು ಮೂರು ಸಲ ಹೋದಾಗಲೂ ಬಾಗಿಲು ಹಾಕಿತ್ತು. ನಂತರ ಬೆಳಗ್ಗೆ 9 ಗಂಟೆ ಸಮಯದಲ್ಲಿ ಹೋಗಿ ನೋಡಿದಾಗ ಅಲ್ಲಿ ಹೆರಿಗೆಯಾದ ವಾಸನೆ ಬಂದಿದೆ. ತಕ್ಷಣ ಸಿಬ್ಬಂದಿ ಆಚೀಚೆ ನೋಡಿ ಕಣ್ಣೆತ್ತಿ ಗಮನ ಹರಿಸಿದಾಗ ಆಗ ತಾನೆ ಜನಿಸಿದ ಹೆಣ್ಣು ನವಜಾತ ಶಿಶು ಬಚ್ಚಲ ಕೋಣೆಯ ಕಿಟಕಿಯಲ್ಲಿ ನೇತಾಡುತ್ತಿರುವುದು ಕಂಡುಬಂದಿದೆ.

ನವಜಾತ ಶಿಶುವನ್ನು ನೇತು ಹಾಕಿದ್ದನ್ನು ನೋಡಿ ಗಾಬರಿಗೊಂಡ ಆಸ್ಪತ್ರೆ ಸಿಬ್ಬಂದಿ ವೆಂಕಟೇಶ ಕೂಡಲೇ ವಿಷಯವನ್ನು ಕರ್ತವ್ಯ ನಿರತ ವೈದ್ಯ ಡಾ.ಜಯರಾಮ್ ಅವರಿಗೆ ತಿಳಿಸಿದ್ದಾರೆ. ತಕ್ಷಣ ವೈದ್ಯರು, ದಾದಿಯರು ಬಂದು ಪರಿಶೀಲಿಸಿದಾಗ ಮಗು ನೇತಾಡುತ್ತಾ ಉಸಿರಾಡುತ್ತಿತ್ತು. ತಡಮಾಡದೇ ಚಿಕಿತ್ಸೆ ನೀಡಲು ವೈದ್ಯರು ಪ್ರಯತ್ನಿಸಿದರಾದರೂ ಅಷ್ಟರಲ್ಲಿ ನವಜಾತ ಶಿಶು ಮೃತಪಟ್ಟಿದೆ.

ಹೆರಿಗೆ ನೋವು ಬಂದ ಕೂಡಲೇ ಆಸ್ಪತ್ರೆಗೆ ಬಂದು ಬಾತ್​ರೂಮ್​ ಒಳಗೆ ತೆರಳಿ ಹೆರಿಗೆ ಮಾಡಿಕೊಂಡಿದ್ದಾರೆ. ಆದರೆ ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ಶಿಶುವಿನ ಕುತ್ತಿಗೆಗೆ ನೇಣು ಬಿಗಿದು ಒಳಗಡೆಯಿಂದ ಹೊರಗಡೆ ತಳ್ಳಲು ಪ್ರಯತ್ನಿಸಿದ್ದಾರೆ. ಆದರೆ, ಮಗು ಕಿಟಕಿಯಲ್ಲಿ ಆಚೆ ತೂರಿಲ್ಲವಾದ್ದರಿಂದ ಗಾಬರಿಯಿಂದ ಅಲ್ಲೇ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ.

ಸ್ಥಳಕ್ಕೆ ಚಿಂತಾಮಣಿ ನಗರ ಠಾಣೆ ಪೊಲೀಸರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಧಿಕಾರಿಗಳು ಭೇಟಿ ನೀಡಿದ್ದು ಆಸ್ಪತ್ರೆಯ ಸಿಬ್ಬಂದಿಯಿಂದ ಮಾಹಿತಿ ಪಡೆಯುತ್ತಿದ್ದಾರೆ. ವೈದ್ಯರು ಹಾಗೂ ಪೊಲೀಸರು ಆಸ್ಪತ್ರೆಯ ಸಿಸಿಟಿವಿಯ ಮೊರೆ ಹೋಗಿದ್ದು ಆಸ್ಪತ್ರೆಗೆ ಬಂದ ಗರ್ಭಿಣಿಯರು ಹಾಗೂ ಹೆರಿಗೆಯಾದವರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!