- Advertisement -
- Advertisement -





ಚಿಕ್ಕಬಳ್ಳಾಪುರ: ದೇವನಹಳ್ಳಿ ಬಳಿ ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೂವರು ಹುಣಸಮಾರೇನಹಳ್ಳಿ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಎಂದು ತಿಳಿದು ಬಂದಿದೆ. ಮೃತರಲ್ಲಿ ಓರ್ವನನ್ನು ಚಿಕ್ಕಜಾಲ ಮೂಲದ ತೌಸೀಫ್ ಎಂದು ಗುರುತಿಸಲಾಗಿದ್ದು, ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. ಮೂವರು ವಿದ್ಯಾರ್ಥಿಗಳು ದೇವನಹಳ್ಳಿಯಿಂದ ಬೂದಿಗೆರೆ ಕಡೆಗೆ ಹೋಗುತ್ತಿದ್ದ ವೇಳೆ ಬೈಕ್ ಡಿವೈಡರ್‌ಗೆ ಡಿಕ್ಕಿಯಾಗಿ, ಎದುರಿಗೆ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಮೂವರ ಮೃತದೇಹ ಛಿದ್ರಗೊಂಡಿವೆ.
ಅಪಘಾತದ ಬಳಿಕ ಟಿಪ್ಪರ್ ಚಾಲಕ, ಟಿಪ್ಪರ್ ಸಮೇತ ಪರಾರಿಯಾಗಿದ್ದು, ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತರನ್ನು ಸ್ಥಳೀಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
- Advertisement -








