Tuesday, July 28, 2026
spot_imgspot_img
spot_imgspot_img

ಚಿಕ್ಕಬಳ್ಳಾಪುರ: ಹಣ ತರ್ತೀನಿ ಅಂತ ಹೋಗಿ ತಾಯಿ ಪರಾರಿ – ಅನಾಥವಾದ 2 ದಿನದ ಮಗು

- Advertisement -
- Advertisement -

ಚಿಕ್ಕಬಳ್ಳಾಪುರ: 2 ದಿನಗಳ ಹಿಂದೆಯಷ್ಟೇ ಜನಿಸಿದ್ದ ನವಜಾತ ಶಿಶುವನ್ನು ಬಿಟ್ಟು ತಾಯಿ ನಾಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ಬೆಳಕಿಗೆ ಬಂದಿದೆ.

ದೇವನಹಳ್ಳಿಯ ಖಾಸಗಿ ಆಸ್ಪತ್ರೆಯೊಂದರದಲ್ಲಿ ಕಳೆದ ಶುಕ್ರವಾರ (ಜು.24) ಹೆರಿಗೆಗೆ ಅಂತ ಬಂದಿದ್ದ ಯುವತಿಗೆ ಗಂಡು ಮಗು ಜನನವಾಗಿತ್ತು. ಮಗುವಿನ ತೂಕ ಕಡಿಮೆ ಹಾಗೂ ಉಸಿರಾಟದ ಸಮಸ್ಯೆಯಿದ್ದ ಹಿನ್ನೆಲೆ ದೇವಹಳ್ಳಿಯಿಂದ ಅಂಬ್ಯುಲೆನ್ಸ್ ಮೂಲಕ ತಾಯಿ ಹಾಗೂ ಕೇರ್ ಟೇಕರ್ ನರ್ಸ್ ಮೂಲಕ ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಗೆ ಕಳುಹಿಸಿಕೊಟ್ಟಿದ್ರು. ಆದರೆ ಚಿಕ್ಕಬಳ್ಳಾಪುರಕ್ಕೆ ಬಂದ ತಾಯಿ, ಮಗುವಿನ ಚಿಕಿತ್ಸೆಗೆ ಹಣ ತರ್ತೀನಿ ಅಂತ ಹೇಳಿ ಹೊರಟ್ಟಿದ್ದು, ಮರಳಿ ಬಂದಿಲ್ಲ. ಇತ್ತ ತಾಯಿ ಇಲ್ಲದೆ ಮಗು ಅನಾಥವಾಗಿದೆ.

ಸದ್ಯ ಚಿಕ್ಕಬಳ್ಳಾಪುರದ ಖಾಸಗಿ ಆಸ್ಪತ್ರೆಯ ಎನ್‌ಐಸಿಯುನಲ್ಲಿ ಮಗುವಿಗೆ ಚಿಕಿತ್ಸೆ ಕೊಡಲಾಗುತ್ತಿದೆ. ವೈದ್ಯರು ಮಗುವಿನ ಬಗ್ಗೆ ಮಾಹಿತಿ ತಿಳಿಯಲು ತಂದೆ, ತಾಯಿ ಎಲ್ಲಿ ಅಂದಾಗ ಕೇರ್ ಟೇಕರ್ ಹಣ ತರಲು ಹೋಗಿದ್ದಾರೆ, ವಾಪಸ್ ಬಂದಿಲ್ಲ ಅಂದಿದ್ದಾಳೆ. ಇದರಿಂದ ಅನುಮಾನಗೊಂಡ ಚಿಕ್ಕಬಳ್ಳಾಪುರ ಖಾಸಗಿ ಆಸ್ಪತ್ರೆಯ ವೈದ್ಯರು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದ್ದು, ಮಾಹಿತಿ ಆಧರಿಸಿ ಆಸ್ಪತ್ರೆಗೆ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಅತ್ತ ದೇವನಹಳ್ಳಿ ಖಾಸಗಿ ಆಸ್ಪತ್ರೆಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಆಸ್ಪತ್ರೆಯಲ್ಲಿ ಯುವತಿ ನೀಡಿರುವ ಆಧಾರ್ ಕಾರ್ಡ್ ನಲ್ಲಿ ಹಾವೇರಿ ಮೂಲದ ವಿಳಾಸ ಪತ್ತೆಯಾಗಿದೆ. ಹೀಗಾಗಿ ಯುವತಿ ಪತ್ತೆ ಹಚ್ಚುವ ಕೆಲಸ ಮಾಡಬೇಕಿದೆ. ಸದ್ಯ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಯುವತಿಗೆ ಮದುವೆ ಆಗಿರಲಿಲ್ಲ, ಹಾಗಾಗಿ ಮಗು ಬಿಟ್ಟು ಹೋಗಿರಬಹುದಾ ಎಂಬ ಅನುಮಾನ ಮೂಡಿದೆ.

- Advertisement -

Related news

error: Content is protected !!