Tuesday, July 21, 2026
spot_imgspot_img
spot_imgspot_img

ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ಸಾವು!

- Advertisement -
- Advertisement -

ಚಿಕ್ಕಬಳ್ಳಾಪುರ: ರೆಸಾರ್ಟ್‌ನ ಸ್ವಿಮ್ಮಿಂಗ್ ಪೂಲ್‌ಗೆ ಧುಮುಕಿದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚಿಂತಡಪಿ ಗ್ರಾಮದ ಬಳಿ ನಡೆದಿದೆ.

ಕುಂದಲಗುರ್ಕಿ ಗ್ರಾಮದ ರೇಖಾ (37) ಮೃತ ಮಹಿಳೆ. ರೇಖಾ ಎನ್‌ಜಿಓ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಸಂಸ್ಥೆಯ ವತಿಯಿಂದ ಚಿಂತಡಪಿ ಗ್ರಾಮದ ರೆಸಾರ್ಟ್ ಕಂ ಹೋಟೆಲ್‌ನಲ್ಲಿ 2 ದಿನಗಳ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಕಾರ್ಯಾಗಾರದಲ್ಲಿ ಭಾಗಿಯಾಗಿದ್ದ ರೇಖಾ ಸಂಜೆ 6 ಗಂಟೆಯ ನಂತರ ಈಜುಕೊಳದಲ್ಲಿ ಈಜಾಡುವ ಸಲುವಾಗಿ ಧುಮುಕಿದ್ದಾರೆ. ಈಜು ಬರುತ್ತಿದ್ದರೂ ಆಕೆ ಮುಳುಗಿ ಸಾವನ್ನಪ್ಪಿದ್ದಾರೆ.

ಕೆಲಕಾಲ ನೀರಿನಲ್ಲಿ ಧುಮುಕಿರುವ ಮಹಿಳೆ ರೇಖಾ ಈಜಾಡುತ್ತಿದ್ದಾಳೆ ಅಂತಲೇ ಎಲ್ಲರೂ ಭಾವಿಸಿದ್ದಾರೆ. ಆದರೆ ಕೆಲ ನಿಮಿಷಗಳ ಕಾಲ ಮೇಲೆ ಬರದೆ ನೀರಲ್ಲೇ ಮುಳುಗಿದ್ದರಿಂದ ಅನುಮಾನಗೊಂಡ ಸಹೋದ್ಯೋಗಿಗಳು ನೀರಿನಿಂದ ಮೇಲೆ ಎತ್ತಿಕೊಂಡು ಬಂದಿದ್ದಾರೆ. ಕೂಡಲೇ ಶಿಡ್ಲಘಟ್ಟ ಸರ್ಕಾರಿ ಆಸ್ಪತ್ರೆಗೆ ಕರೆತಂದಿದ್ದು, ಅಷ್ಟರಲ್ಲೇ ಮಹಿಳೆ ಮೃತಪಟ್ಟಿರುವುದಾಗಿ ವೈದ್ಯರು ಧೃಢೀಕರಿಸಿದ್ದಾರೆ. ಈ ಸಂಬಂಧ ಮುಂಜಾಗ್ರತಾ ರಕ್ಷಣಾ ಕವಚಗಳನ್ನ ನೀಡದೆ ನಿರ್ಲಕ್ಷ್ಯದಡಿ ರೆಸಾರ್ಟ್ ಮಾಲೀಕರು, ಹಾಗೂ ರೇಖಾರನ್ನ ಕೆರೆದುಕೊಂಡು ಹೋಗಿದ್ದ ಸಂಸ್ಥೆಯ ವಿರುದ್ಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಳನ್ನ ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಈ ಘಟನೆ ರೆಸಾರ್ಟ್‌ನ ಸಿಸಿಟಿವಿಯಲ್ಲಿ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!