Wednesday, September 9, 2026
spot_imgspot_img
spot_imgspot_img

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ

- Advertisement -
- Advertisement -

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ.

ಸವಿತಾ – ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು. ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಮಾಹಿತಿ ತಿಳಿದು ಬಂದಿದೆ.

- Advertisement -

Related news

error: Content is protected !!