- Advertisement -
- Advertisement -



ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬನ ಮೃತದೇಹವು ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಮೃತನ ಪತ್ನಿಯೇ ಆತನನ್ನು ಕೊಲೆ ಮಾಡಿರಬಹುದು ಎಂಬ ಬಲವಾದ ಅನುಮಾನ ವ್ಯಕ್ತಪಡಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ಗುಂಡ್ಲುಗುರ್ಕಿ ಗ್ರಾಮದ ನಿವಾಸಿ, ಮುನಿರಾಜು(42) ಮೃತ ವ್ಯಕ್ತಿ. ಆತನ ಪತ್ನಿಯ ಅಕ್ರಮ ಸಂಬಂಧದಿಂದ ಮುನಿರಾಜು ಬೇಸರಗೊಂಡಿದ್ದ. ಈ ಕುರಿತು ನಿನ್ನೆ (ಫೆ.27) ಮಧ್ಯರಾತ್ರಿ ಒಂದು ಗಂಟೆಯವರೆಗೂ ಸ್ಥಳೀಯರು ಹಾಗೂ ಪತ್ನಿಯ ಸಂಬಂಧಿಕರು ನ್ಯಾಯ ಪಂಚಾಯಿತಿ ನಡೆಸಿದ್ದರು ಎನ್ನಲಾಗಿದೆ.
ಅದಾದ ಬಳಿಕವೇ ಮುನಿರಾಜು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದು, ಇದು ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬುದರ ಕುರಿತು ಸ್ಪಷ್ಟತೆ ಇಲ್ಲ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ಮುಂದುವರಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ
- Advertisement -








