Saturday, May 4, 2024
spot_imgspot_img
spot_imgspot_img

ಅನುಮಾನಾಸ್ಪದವಾಗಿ ಯುವತಿ ಸಾವು; ತಂದೆಯೇ ಕೊಲೆ ಮಾಡಿರುವ ಆರೋಪ..!

- Advertisement -G L Acharya panikkar
- Advertisement -

ಪದವಿ ವಿದ್ಯಾರ್ಥಿನಿ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ಘಟನೆ ನಡೆದಿದೆ. ಮಗಳನ್ನೇ ತಂದೆ ಕೊಲೆ ಮಾಡಿರುವ ಆರೋಪ ಕೇಳಿ ಬಂದಿರೋದು ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಬಳಿಯ ವರವಣಿ ಗ್ರಾಮದಲ್ಲಿ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಯುವತಿ ಶೀಲಾ (22) ಎನ್ನಲಾಗಿದೆ.

ರವಿಶಂಕರ್ ಹಾಗೂ ಜಯಂತಮ್ಮ ದಂಪತಿಯ ಒಬ್ಬಳೇ ಮಗಳು. ಆದರೆ ಶೀಲಾ ಕಳೆದ ಆಗಸ್ಟ್ 14 ರಂದು ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಮೃತಳ ತಂದೆ ರವಿಶಂಕರ್, ತನ್ನ ಮಗಳು ಹುಷಾರಿಲ್ಲದ ಕಾರಣ ಕಾಲೇಜಿಗೆ ಹೋಗದೆ ಮನೆಯಲ್ಲಿಯೇ ಇದ್ದು ಅನಾರೋಗ್ಯದ ಹಿನ್ನೆಲೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ದೂರು ನೀಡಿದ್ದಾನೆ.

ಈ ಸಂಬಂಧ ಐಪಿಸಿ ಸೆಕ್ಷನ್ 174 ಸಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡಿರುವ ಮಂಚೇನಹಳ್ಳಿ ಪೊಲೀಸರು ತನಿಖೆ ನಡೆಸಿದ್ದಾರೆ. ಆದರೆ ಈ ಮಧ್ಯೆ ಶೀಲಾ ಸಾವಿನ ಬಗ್ಗೆ ಸಂಬಂಧಿಕರಿಗೆ ಸಾಕಷ್ಟು ಅನುಮಾನಗಳು ಮೂಡಿವೆ. ಹೀಗಾಗಿ ಮೃತ ಶೀಲಾಳ ತಾಯಿ ಜಯಂತಮ್ಮನವರ ಸಹೋದರಿಯರು ಶೀಲಾ ಆತ್ಮಹತ್ಯೆ ಮಾಡಿಕೊಂಡಿಲ್ಲ, ಬದಲಾಗಿ ಆಕೆಯನ್ನು ತಂದೆಯೇ ಹಲ್ಲೆ ಮಾಡಿ ಕೊಲೆ ಮಾಡಿ ನೇಣು ಹಾಕಿದ್ದಾನೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ಮೃತ ಶೀಲಾ ತಾಯಿ ಜಯಂತಮ್ಮಳ ಸಹೋದರಿಯರು ಹೇಳೋ ಹಾಗೆ ಶೀಲಾಳ ತಂದೆ ರವಿಶಂಕರ್ ತಾಯಿ ಹಾಗೂ ಮಗಳಿಗೆ ವಿನಾಕಾರಣ ಕಿರುಕುಳ ಕೊಟ್ಟು ದೂರ ಮಾಡುತ್ತಿದ್ದರು. ಇನ್ನೂ ರವಿಶಂಕರ್ ಬೇರೊಬ್ಬರ ಜೊತೆ ಅನೈತಿಕ ಸಂಬಂಧ ಸಹ ಹೊಂದಿದ್ದು ಇದಕ್ಕೆ ಮಗಳು ಸದಾ ವಿರೋಧ ಮಾಡುತ್ತಿದ್ದಳು. ಇದರಿಂದ ಮಗಳನ್ನು ಕಂಡರೆ ತಂದೆಗೆ ಆಗುತ್ತಿರಲಿಲ್ಲ.

ಇನ್ನೂ ಶೀಲಾ ಯಾರನ್ನೋ ಲವ್ ಮಾಡುತ್ತಿದ್ದಳು ಎನ್ನುವ ಅನುಮಾನದ ಮೇರೆಗೆ ಪದೇ ಪದೆ ಮಗಳಿಗೆ ಹೊಡೆಯೋದು ಬಡಿಯೋದು ಮಾಡಿ ಕಿರುಕುಳ ಸಹ ಕೊಡುತ್ತಿದ್ದ. ಇದೇ ವಿಚಾರದಲ್ಲಿ ಮಗಳು ಕದ್ದು ಮುಚ್ಚಿ ಫೋನ್ ಬಳಸುತ್ತಿದ್ದುದನ್ನು ಕಂಡು ಆಕೆಯ ಮೇಲೆ ಹಲ್ಲೆ ಮಾಡಿ ಕೊಲೆ ಮಾಡಿದ್ದಾನೆ. ನಮಗೆ ನ್ಯಾಯ ಕೊಡಿಸಿ ಎಂದು ಮೃತಳ ಸಂಬಂಧಿಕರು ಈಗ ಚಿಕ್ಕಬಳ್ಳಾಪುರ ವಿಭಾಗದ ಡಿವೈಎಸ್‌ಪಿ ಮೊರೆ ಹೋಗಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಗೂ ಪತ್ರ ಬರೆದು ನ್ಯಾಯಕ್ಕಾಗಿ ಅಂಗಲಾಚಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

Insta: glacharyajewellers
Fb: glacharya
- Advertisement -

Related news

error: Content is protected !!