Tuesday, July 21, 2026
spot_imgspot_img
spot_imgspot_img

ಚಿಕ್ಕಬಳ್ಳಾಪುರ: ಟಿಪ್ಪರ್–ಬೈಕ್ ಡಿಕ್ಕಿ; ನಾಲ್ವರು ಯುವಕರ ದುರ್ಮರಣ

- Advertisement -
- Advertisement -

ಚಿಕ್ಕಬಳ್ಳಾಪುರ: ನಗರದ ಹೊರವಲಯದ ಅಜ್ಜವಾರ ಸಮೀಪ ಟಿಪ್ಪರ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ಸಂಭವಿಸಿದೆ.


ಜಿಲ್ಲಾಡಳಿತ ಭವನದ ಸಮೀಪ, ಅಜ್ಜವಾರ ಗ್ರಾಮ ಬಳಿ ರಾತ್ರಿ ಸುಮಾರು 9.30ರ ವೇಳೆಗೆ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗ್ರಾಮದ ನಂದೀಶ್, ನರಸಿಂಹ, ಅರುಣ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ನಾಲ್ವರೂ ಆಪ್ತ ಸ್ನೇಹಿತರಾಗಿದ್ದು, ಚಿಕ್ಕಬಳ್ಳಾಪುರ ನಗರಕ್ಕೆ ತೆರಳಿ ಮರಳಿ ತಮ್ಮ ಊರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ದುರ್ಘಟನೆ ನಡೆದಿದೆ.
ಶಿಡ್ಲಘಟ್ಟ ದಿಕ್ಕಿನಿಂದ ಅತೀವೇಗವಾಗಿ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದ ಟಿಪ್ಪರ್ ಲಾರಿ, ಮುಂಭಾಗದಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಅದರಲ್ಲಿದ್ದ ನಾಲ್ವರೂ ಯುವಕರು ಗಂಭೀರ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


ಘಟನೆಯ ಮಾಹಿತಿ ಪಡೆದ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್‌ಐ ಶರಣಪ್ಪ ಹಾಗೂ ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆ ಶವಗಾರಕ್ಕೆ ರವಾನಿಸಲಾಗಿದೆ. ಈ ಕುರಿತು ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ನಡೆಯುತ್ತಿದೆ.

- Advertisement -

Related news

error: Content is protected !!