Monday, June 22, 2026
spot_imgspot_img
spot_imgspot_img

ಶಿವಮೊಗ್ಗ: ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ

- Advertisement -
- Advertisement -

ಶಿವಮೊಗ್ಗ: ಇದು ಇಡೀ ನಾಗರಿಕ ಸಮಾಜ ತಲೆ ತಗ್ಗಿಸುವಂತಹ ಘಟನೆ. ನಡೆದಿರುವುದು ಶಿವಮೊಗ್ಗ ಜಿಲ್ಲೆಯಲ್ಲಿ . ಕೊರೋನಾ ಸೋಂಕಿತ ತಾಯಿಯ ಆರೈಕೆಗಾಗಿ ನಗರದ ಮೆಗ್ಗಾನ್ ಆಸ್ಪತ್ರೆಯಲ್ಲಿದ್ದ ಬಾಲಕಿಯೊಬ್ಬಳ ಮೇಲೆ ವಾರ್ಡ್ ಬಾಯ್ ಸೇರಿದಂತೆ ಮೂರು ಮಂದಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.

ಆರೋಪಿ ಮನೋಜ್ ವಾರ್ಡ್ ಬಾಯ್ ಆಗಿ ಕೆಲಸ ಮಾಡುತ್ತಿದ್ದ. ಕಳೆದ ಒಂದು ತಿಂಗಳಿನಿಂದ ಬಾಲಕಿಯ ತಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಪರಿಚಯವಾಗಿದೆ.

ಮನೋಜ್ , ಊಟ ತಂದು ಕೊಡುತ್ತಿದ್ದ. ಶಿವಮೊಗ್ಗದಲ್ಲಿ ಹಿಂಸಾಚಾರದ ಹಿನ್ನೆಲೆಯಲ್ಲಿ ಕರ್ಫ್ಯೂ ಹೇರಿದ್ದರಿಂದ ಹೋಟೆಲ್ ಗಳು ಬಂದ್ ಆಗಿತ್ತು.

ದೂರದಿಂದ ಕಾರಿನಲ್ಲಿ ಊಟ ತಂದು ಕೊಡುತ್ತೇನೆ ಎಂದು ಹೇಳಿ ಬಾಲಕಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಕಾರಿನಲ್ಲಿ ಪ್ರಜ್ವಲ್ , ವಿನಯ್ ಮತ್ತು ಇನ್ನೊಬ್ಬ ವ್ಯಕ್ತಿ ಇದ್ದರೆಂದು ಆರೋಪಿಸಲಾಗಿದೆ. ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಿಸಲಾಗಿದೆ.

- Advertisement -

Related news

error: Content is protected !!