Sunday, July 19, 2026
spot_imgspot_img
spot_imgspot_img

ಚಿಕ್ಕಮಗಳೂರು: ಸಂಚರಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು

- Advertisement -
- Advertisement -

ಚಿಕ್ಕಮಗಳೂರು: ಕೆಎಸ್‌ಆರ್‌ಟಿಸಿ ಬಸ್ ಸಂಚರಿಸುತ್ತಿದ್ದಾಗಲೇ ಇಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಜಿಲ್ಲೆಯ ಹೃದಯಭಾಗದಲ್ಲಿರುವ ಜೂನಿಯರ್ ಕಾಲೇಜು ಸಮೀಪ ಮಾ.3 ಮಧ್ಯಾಹ್ನ ನಡೆದಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗೆ ಸೇರಿದ ಚಿಕ್ಕಮಗಳೂರು ಡಿಪೋ ಬಸ್ ಜಿಲ್ಲಾ ಕೇಂದ್ರದಿಂದ ಹಾಸನ ಕಡೆಗೆ ತೆರಳುತ್ತಿತ್ತು ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದಿಂದ ಹೊರಟು ಜೂನಿಯರ್ ಕಾಲೇಜು ಬಳಿ ತಲುಪುತ್ತಿದ್ದಂತೆ ಇಂಜಿನ್ ಭಾಗದಲ್ಲಿ ದಟ್ಟ ಹೊಗೆ ಮತ್ತು ಬೆಂಕಿ ಕಾಣಿಸಿಕೊಂಡಿತು.

ಬೆಂಕಿಯ ಸುಳಿವು ಸಿಗುತ್ತಿದ್ದಂತೆ ಚಾಲಕ ತಕ್ಷಣ ಎಚ್ಚೆತ್ತು, ಬಸ್ಸನ್ನು ರಸ್ತೆ ಬದಿಯಲ್ಲಿ ನಿಲ್ಲಿಸಿ, ಪ್ರಯಾಣಿಕರೆಲ್ಲರನ್ನು ಕೆಳಗಿಳಿಯುವಂತೆ ಸೂಚಿಸಿದರು. ಪರಿಣಾಮ ಬಸ್ಸಿನಲ್ಲಿದ್ದ ಹತ್ತಾರು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ತಕ್ಷಣ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದರು. ಆದರೆ ಬೆಂಕಿಯಿಂದ ಬಸ್ಸಿನ ಮುಂಭಾಗ ಭಾಗಶಃ ಹಾನಿಗೊಳಗಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!