Thursday, June 4, 2026
spot_imgspot_img
spot_imgspot_img

ಚಿಕ್ಕಮಗಳೂರು : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!

- Advertisement -
- Advertisement -

ಚಿಕ್ಕಮಗಳೂರು : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದೀಪುರದಲ್ಲಿ ನಡೆದಿದೆ. ರವಿ(36) ಶವವಾಗಿ ಪತ್ತೆಯಾದ ವ್ಯಕ್ತಿ.

ವಾರದ ಹಿಂದೆ ನಾಪತ್ತೆಯಾಗಿದ್ದು, ನಂದೀಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗದ ತೋಟದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ದೇಹ ಕೊಳೆತ ಸ್ಥಿತಿಯಲ್ಲಿದ್ದು ಕಾರಣವೇನೆಂಬುದು ತಿಳಿದು ಬಂದಿಲ್ಲ. ಮೂಡಿಗೆರೆ ಪೋಲೀಸ್ ಸ್ಥಳ ಪರೀಕ್ಷೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!