Wednesday, July 22, 2026
spot_imgspot_img
spot_imgspot_img

ಚಿಕ್ಕಮಗಳೂರು: ಡೆತ್‌ನೋಟ್ ಬರೆದಿಟ್ಟು ಗ್ರಾ.ಪಂ ವಾಟರ್ ಮ್ಯಾನ್ ಆತ್ಮಹತ್ಯೆ!

- Advertisement -
- Advertisement -

ಚಿಕ್ಕಮಗಳೂರು: ತಾಲೂಕಿನ ಹುಣಸೇಮಕ್ಕಿ ಗ್ರಾಮದಲ್ಲಿ ಡೆತ್‌ ನೋಟ್ ಬರೆದಿಟ್ಟು ಗ್ರಾಮ ಪಂಚಾಯಿತಿಯ ವಾಟರ್ ಮ್ಯಾನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ರಮೇಶ್(47) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಆತ್ಮಹತ್ಯೆಗೂ ಮುನ್ನ ರಮೇಶ್ ಡೆತ್‌ನೋಟ್ ಬರೆದಿಟ್ಟಿದ್ದು, ನಾನು ತುಂಬಾ ವರ್ಷದಿಂದ ಗ್ರಾಮ ಪಂಚಾಯಿತಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದು, ನನಗೆ 11 ತಿಂಗಳಿನಿಂದ ವೇತನ ಕೊಟ್ಟಿಲ್ಲ. ಫೈನಾನ್ಸ್‌ನಲ್ಲಿ ಸಾಲ ಮಾಡಿರುವೆ, ಸಂಬಳ ನೀಡದಿದ್ದಕ್ಕೆ ಸಾಲಕಟ್ಟಲು ಆಗುತ್ತಿಲ್ಲ.

ಫೈನಾನ್ಸ್ ನವರು ಹಾಗೂ ಸಂಘದವರು ಮನೆಗೆ ಬಂದು ಹಣ ಕಟ್ಟುವಂತೆ ನನಗೆ ಮತ್ತು ನಮ್ಮ ಮನೆಯವರಿಗೆ ತೊಂದರೆ ಕೊಡುತ್ತಿದ್ದಾರೆ. ಹಾಗಾಗಿ ನನಗೆ ತುಂಬಾ ಮನಸ್ಸಿಗೆ ಬೇಜಾರಾಗಿದೆ. ಗ್ರಾಮ ಪಂಚಾಯಿತಿ ಕಚೇರಿಯಲ್ಲೂ ಕೆಲವರು ಕೆಲಸ ಮಾಡಲು ಬಿಡುತ್ತಿಲ್ಲ -ಎಂದು ಅವರ ಹೆಸರನ್ನು ಡೆತ್‌ನೋಟ್‌ಲ್ಲಿ ಉಲ್ಲೇಖಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

ಘಟನೆ ಸಂಬಂಧ ಆಲೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!