- Advertisement -
- Advertisement -

ಚಿಕ್ಕಮಗಳೂರು: ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಚಿಕ್ಕಮಗಳೂರಿನಲ್ಲಿ ಮಹಾಮಳೆಯ ಕಾರಣ ನದಿಗಳು ತುಂಬಿ ಹರಿಯುತ್ತಿದ್ದು, ಗಾಳಿ ಮಳೆಗೆ ಹಲವಡೆ ವಿದ್ಯುತ್ ಕಂಬಗಳು ಬಿದ್ದಿವೆ. ನೆಲಕ್ಕೆ ಬಿದ್ದ ವಿದ್ಯುತ್ ತಂತಿ ತುಳಿದು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.ಕಡೂರು ತಾಲ್ಲೂಕಿನ ಜಕ್ಕನಹಳ್ಳಿ ಗ್ರಾಮದ ಪರಮೇಶ್ವರಪ್ಪ ಎಂಬವರು ಸಾವನಪ್ಪಿದ್ದಾರೆ.


ಶೃಂಗೇರಿ, ಕೆರೆಕಟ್ಟೆ, ಕಿಗ್ಗಾ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗಾ ನದಿಯು ಮೈದುಂಬಿ ಹರಿಯುತ್ತಿದೆ. ಶೃಂಗೇರಿಯ ಪ್ರವಾಸಿಗರ ವಾಹನ ನಿಲುಗಡೆಯ ಗಾಂಧಿ ಮೈದಾನ ಜಲಾವೃತವಾಗಿದೆ. ರಸ್ತೆ ಮೇಲೆ ನೀರು ಹರಿಯುತ್ತಿದೆ.

ಭಾರಿ ಮಳೆಯಿಂದಾಗಿ ಮಲ್ಗೋಡ್ ಸೇತುವೆ ಜಲಾವೃತವಾಗಿದ್ದು, ಬಾಳೆಹೊನ್ನೂರು-ಕಳಸ ಸಂಚಾರ ಬಂದ್ ಆಗಿದೆ. ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿವೆ. ಇದರಿಂದ ರಾಷ್ಟ್ರೀಯ ಹೆದ್ದಾರಿ 173 ಬಂದ್ ಆಗಿದ್ದು, ಮೂಡಿಗೆರೆ-ಮಂಗಳೂರು ಸಂಚಾರ ಸ್ಥಗಿತವಾಗಿದೆ. ಚಿಕ್ಕಮಗಳೂರು-ಮೂಡಿಗೆರೆ ಸಂಚಾರವೂ ಬಂದ್ ಆಗಿದೆ.

- Advertisement -