Tuesday, July 21, 2026
spot_imgspot_img
spot_imgspot_img

ಚಿಕ್ಕೋಡಿ: ಆಸ್ತಿಗಾಗಿ ಸ್ನೇಹಿತನಿಂದಲೇ ಕಬ್ಬಿನ ತೋಟದಲ್ಲಿ ಮಹಿಳೆಯ ಕೊಲೆ

- Advertisement -
- Advertisement -

ಚಿಕ್ಕೋಡಿ: ಕಬ್ಬಿನ ತೋಟದಲ್ಲಿ ಮಹಿಳೆಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ.

ಸುಜಾತಾ ಪವಾರ (34) ಮೃತ ಮಹಿಳೆ. ಮಾರ್ಚ್ 5 ರಂದು ಮಹಿಳೆಯನ್ನು ಅಥಣಿ ಪಟ್ಟಣದ ಸಮೀಪದಲ್ಲಿರುವ ಪ್ರದೀಪ್ ಗುಂಡಾ ಎಂಬುವವರ ಕಬ್ಬಿನ ತೋಟದಲ್ಲಿ ಕೊಲೆ ಮಾಡಲಾಗಿದೆ.

ಮೃತ ಸುಜಾತಾ ಹಾರೂಗೇರಿಯಲ್ಲಿರುವ ಆಕೆಯ ಗಂಡನ ಜೊತೆ ಸಂಬಂಧ ಕಡಿದುಕೊಂಡು ತವರು ಮನೆಯಾದ ಅಥಣಿಯಲ್ಲಿ ವಾಸವಿದ್ದಳು. ಈ ವೇಳೆ ಕುಮಾರ ಹವಾಲ್ದಾರ್ ಸುಜಾತಾ ಜೊತೆ ಸಂಬಂಧ ಹೊಂದಿದ್ದ. ಕುಮಾ‌ರ್ ಮಹಿಳೆಯ ಆಸ್ತಿ ಹೊಡೆಯಲು ಆಕೆಯನ್ನು ಕೊಲೆ ಮಾಡಿದ್ದಾನೆ ಎನ್ನುವುದು ಪೊಲೀಸ್‌ ತನಿಖೆಯಿಂದ ತಿಳಿದು ಬಂದಿದೆ. ಮಾರ್ಚ್ 5 ರಂದು ಮಧ್ಯಾಹ್ನ ಆರೋಪಿ ಕುಮಾರ ಸುಜಾತಾಳನ್ನು ಬೈಕ್ ಮೇಲೆ ಕರೆದೊಯ್ದು ಕಬ್ಬಿನ ತೋಟದಲ್ಲಿ ಆಕೆಯ ಕುತ್ತಿಗೆಗೆ ಬಟ್ಟೆಯಿಂದ ಕಟ್ಟಿ ಉಸಿರು ಗಟ್ಟಿಸಿ ಕೊಲೆ ಮಾಡಿದ್ದಾನೆ.

ಈ ಕುರಿತು ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯನ್ನು ಬಂಧಿಸಿ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!