Saturday, June 20, 2026
spot_imgspot_img
spot_imgspot_img

ಚಿಕ್ಕೋಡಿ: ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ನಿಂದ ಬಟ್ಟೆ ಅಂಗಡಿಗೆ ಬೆಂಕಿ..!

- Advertisement -
- Advertisement -

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಭೀಕರ ಅಗ್ನಿ ಅವಘಡವೊಂದು ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ಪರಿಣಾಮವಾಗಿ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಹೊತ್ತಿ ಉರಿದಿರುವ ಘಟನೆ ನಡೆದಿದೆ.

ಚಿಕ್ಕೋಡಿಯಲ್ಲಿರುವ ಪ್ರಸಿದ್ಧ ಜಯಶ್ರೀ ಗಾರ್ಮೆಂಟ್ಸ್ ಬಟ್ಟೆ ಅಂಗಡಿಯಲ್ಲಿ ಗುರುವಾರ ರಾತ್ರಿ ಈ ದುರ್ಘಟನೆ ಸಂಭವಿಸಿದೆ. ಅಂಗಡಿಯಲ್ಲಿ ಹಠಾತ್ ಕಾಣಿಸಿಕೊಂಡ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಉಂಟಾಗಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಅಂಗಡಿಗೆ ವ್ಯಾಪಿಸಿದೆ. ಜವಳಿ ಅಂಗಡಿಯಾಗಿದ್ದರಿಂದ ಬೆಂಕಿ ಅತ್ಯಂತ ವೇಗವಾಗಿ ಹರಡಿದ್ದು, ಇಡೀ ಕಟ್ಟಡವನ್ನು ದಟ್ಟವಾದ ಹೊಗೆ ಆವರಿಸಿಕೊಂಡಿತ್ತು.

ಅಗ್ನಿ ಅವಘಡದಲ್ಲಿ ಜಯಶ್ರೀ ಗಾರ್ಮೆಂಟ್ಸ್‌ನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಿದ್ಧ ಉಡುಪುಗಳು ಮತ್ತು ಬೆಲೆಬಾಳುವ ಬಟ್ಟೆಗಳು ಸಂಪೂರ್ಣವಾಗಿ ಬೆಂಕಿಗೆ ಆಹುತಿಯಾಗಿವೆ. ಅಂಗಡಿಯ ಮಾಲೀಕರಿಗೆ ಭಾರಿ ಪ್ರಮಾಣದ ಆರ್ಥಿಕ ನಷ್ಟ ಸಂಭವಿಸಿದೆ ಎಂದು ತಿಳಿದುಬಂದಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸಾರ್ವಜನಿಕರ ಸಹಾಯದೊಂದಿಗೆ ಬೆಂಕಿ ನಂದಿಸುವ ಕಾರ್ಯಾಚರಣೆ ಕೈಗೊಂಡರು. ಬೆಂಕಿಯ ತೀವ್ರತೆ ಹೆಚ್ಚಾಗಿದ್ದರಿಂದ, ಅದನ್ನು ನಿಯಂತ್ರಣಕ್ಕೆ ತರಲು ಒಟ್ಟು 3 ಅಗ್ನಿಶಾಮಕ ವಾಹನಗಳನ್ನು ಬಳಸಲಾಯಿತು. ಅಗ್ನಿಶಾಮಕ ಸಿಬ್ಬಂದಿಯ ಸತತ ಹರಸಾಹಸದ ಬಳಿಕ ಬೆಂಕಿಯನ್ನು ಸಂಪೂರ್ಣವಾಗಿ ಹತೋಟಿಗೆ ತರಲಾಗಿದೆ.

ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ. ಸ್ಥಳೀಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!