Friday, March 29, 2024
spot_imgspot_img
spot_imgspot_img

ಕೊರೊನ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ; ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಮನವಿ

- Advertisement -G L Acharya panikkar
- Advertisement -

ಚಿಕ್ಕಮಗಳೂರು: ಕೊರೊನಾ ಸೋಂಕು ಕರ್ನಾಟಕ ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ, ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರು ಬರದಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಜಿಲ್ಲೆಯಲ್ಲಿ ಕೊವಿಡ್ ಪ್ರಕರಣಗಳು ಕ್ರಮೇಣ ಹೆಚ್ಚುತ್ತಿವೆ. ಕೇರಳ, ಮಹಾರಾಷ್ಟ್ರಗಳಲ್ಲಿ ಆತಂಕದ ಪರಿಸ್ಥಿತಿ ನಿರ್ಮಾಣವಾಗಿ. ಹೀಗಾಗಿ, ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ನಿಯಂತ್ರಣ ಅನಿವಾರ್ಯ ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ತಿಳಿಸಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿದೆ. ಪ್ರವಾಸಿಗರಲ್ಲಿ ಸೋಂಕು ಪತ್ತೆಯಾದರೆ ಚಿಕಿತ್ಸೆಯೂ ಕಷ್ಟ ಸಾಧ್ಯ, ಈ ನಿಟ್ಟಿನಲ್ಲಿ ಪ್ರವಾಸಿಗರು ತಮ್ಮ ಪ್ರವಾಸ ಮುಂದೂಡುವುದು ಒಳ್ಳೆಯದು. ಪ್ರವಾಸಿಗರ ಭೇಟಿಗೆ 72 ಗಂಟೆಯೊಳಗಿನ RTPCR ನೆಗೆಟಿವ್ ವರದಿ ಕಡ್ಡಾಯ. ಸರ್ಕಾರದ ನಿಯಮಗಳನ್ನ ಉಲ್ಲಂಘಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾಡಳಿತ ಹೇಳಿದೆ.

ಪ್ರವಾಸ ಮೊಟಕುಗೊಳಿಸಿ ಜಿಲ್ಲಾಡಳಿತಕ್ಕೆ ಸಹಕರಿಸಲು ಮನವಿ ಮಾಡಲಾಗಿದೆ. ಜಿಲ್ಲೆಯ ವಿವಿಧೆಡೆ ಐದು ಚೆಕ್ ಪೋಸ್ಟ್ ಸ್ಥಾಪಿಸಿ ತಪಾಸಣೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!