- Advertisement -
- Advertisement -





ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಆನೆಗುಂಡಿ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಅಪ್ಪ ತನ್ನ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಪ್ರದೀಪ್ ಆಚಾರ್ (29) ಮೃತ ದುರ್ದೈವಿ. ರಮೇಶ್ ಆಚಾರ್ ಮಗನನ್ನೇ ಕೊಲೆಗೈದಿರೋ ಅಪ್ಪ. ಕ್ಷುಲಕ ಕಾರಣಕ್ಕೆ ಕುಡಿದು ಅಪ್ಪ-ಮಗ ಇಬ್ಬರೂ ಆಗಾಗ ಮನೆಯಲ್ಲಿ ಗಲಾಟೆ ಮಾಡುತ್ತಿದ್ದು, ಗಲಾಟೆ ಮಾಡುತ್ತಿದ್ದ ಅಪ್ಪ-ಮಗನ ಕಾಟಕ್ಕೆ ಬೇಸತ್ತು ಪ್ರದೀಪ್ ತಾಯಿ ಮನೆ ಬಿಟ್ಟು ಹೋಗಿದ್ದರು. ಬಳಿಕ ಮನೆಯಲ್ಲಿ ಅಪ್ಪ-ಮಗ ಇಬ್ಬರೇ ವಾಸವಿದ್ದರು.
ಶನಿವಾರ ರಾತ್ರಿ ಮಗನನ್ನು ಕಡಿದು ಅಪ್ಪ ಮಲಗಿದ್ದ. ಮಗ ಪ್ರದೀಪ್ ಇಡೀ ರಾತ್ರಿ ರಕ್ತದ ಮಡುವಿನಲ್ಲಿ ಬಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾನೆ. ಬೆಳಗ್ಗೆ ಮಗನ ಮೃತದೇಹವನ್ನು ಅಪ್ಪ ಹಾಲ್‌ನಿಂದ ಹೊರಕ್ಕೆ ಎಳೆದು ತಂದಿದ್ದನ್ನು ನೋಡಿದ ಅಕ್ಕಪಕ್ಕದವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಜಿತೇಂದ್ರ ಕುಮಾರ್ ದಯಾಮ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








