Wednesday, June 10, 2026
spot_imgspot_img
spot_imgspot_img

ಗೃಹಿಣಿ ಅನುಮಾನಾಸ್ಪದ ಸಾವು – ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆ

- Advertisement -
- Advertisement -

ಚಿಕ್ಕಮಗಳೂರು: ಗುಂಡು ಹಾರಿಸಿಕೊಂಡು ಗೃಹಿಣಿ ಅನುಮಾನಾಸ್ಪದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಹಾಲೇನಹಳ್ಳಿಯಲ್ಲಿ ನಡೆದಿದೆ.

ಸುಮ (55) ಮೃತ ಗೃಹಿಣಿ. ಮನೆಯಲ್ಲಿ ಯಾರು ಇಲ್ಲದ ವೇಳೆ ಘಟನೆ ನಡೆದಿದ್ದು, ಲೈಸೆನ್ಸ್ ಹೊಂದಿದ್ದ ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಮೃತ ಸುಮ ಪತಿ ರಾಜೇಶ್ ಉದ್ಯಮಿಯಾಗಿದ್ದಾರೆ. ಸಾವಿನ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ. ಡೆತ್ ನೋಟ್ ಆಧರಿಸಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಬಸವನಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಬಸವನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!