Sunday, July 19, 2026
spot_imgspot_img
spot_imgspot_img

ಚಿಕ್ಕಮಗಳೂರು: ಬಾವಿ ಕ್ಲೀನ್ ಮಾಡುವಾಗ ಉಸಿರುಗಟ್ಟಿ ಕಾರ್ಮಿಕ ಸಾವು

- Advertisement -
- Advertisement -

ಚಿಕ್ಕಮಗಳೂರು: ಬಾವಿ ಕ್ಲೀನ್ ಮಾಡುವಾಗ ಆಮ್ಲಜನಕದ ಕೊರತೆಯಿಂದ ಉಸಿರುಗಟ್ಟಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ನಗರದ ಉಂಡೇದಾಸರಹಳ್ಳಿ ಬಡಾವಣೆಯಲ್ಲಿ ನಡೆದಿದೆ.

ಮೃತನನ್ನು ಮೋಹನ್ (40) ಎಂದು ಗುರುತಿಸಲಾಗಿದೆ. ದರ್ಶನ್ ಎಂಬವರ ಮನೆಯ ಬಾವಿ ಕ್ಲೀನ್ ಮಾಡಲು ಮೋಹನ್ ತೆರಳಿದ್ದರು. ಬಾವಿಯ ಒಳಗೆ ಇಳಿದಾಗ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡು, ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಚಿಕ್ಕಮಗಳೂರು ನಗರ ಠಾಣೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!