Tuesday, April 20, 2021
spot_imgspot_img
spot_imgspot_img

3 ವರ್ಷದ ಮಗುವಿನ ಮೇಲೆ ಕಾರು ಹರಿದ್ರೂ ಪವಾಡ ರೀತಿಯಲ್ಲಿ ಪಾರು.! ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್.

ಮುಂಬೈ: 3 ವರ್ಷದ ಪುಟ್ಟ ಮಗು ಮೇಲೆ ಕಾರು ಹರಿದ್ರೂ  ಪವಾಡ ರೀತಿಯಲ್ಲಿ ಪಾರಾದ  ಘಟನೆ ಮುಂಬೈನ ಮಲ್ವಾನಿ ಪ್ರದೇಶದಲ್ಲಿ ನಡೆದಿದೆ.

ಈ ಘಟನೆ ಸೆಪ್ಟೆಂಬರ್  11 ರಂದು ನಡೆದಿದೆ. ಸದ್ಯ ಮಗು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗುತ್ತಿದೆ.ಮೂರು ವರ್ಷದ ಬಾಲಕ ಮನೆ ಮುಂದೆ ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಬಂದ ಕಾರು ಆತನ ಮೇಲೆಯೇ ಹರಿದಿರುವುದನ್ನು ವಿಡಿಯೋದಲ್ಲಿ ಕಾಣಬಹುದಾಗಿದೆ.

ಘಟನೆಯಿಂದ ಗಾಯಗೊಂಡ ಬಾಲಕನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಚೇರಿಸಿಕೊಂಡಿದ್ದಾನೆ. ಅಲ್ಲದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಪ್ರಕರಣ ಸಂಬಂಧ ಕಾರು ಡ್ರೈವರ್ ವಿರುದ್ಧ ಕೇಸ್ ದಾಖಲಾಗಿದೆ.

- Advertisement -

MOST POPULAR

HOT NEWS

Related news

error: Content is protected !!