Sunday, July 19, 2026
spot_imgspot_img
spot_imgspot_img

ಚೀನಾದಲ್ಲಿ ಭೀಕರ ಭೂಕುಸಿತ; 8 ಜನರು ಸಾವು, 34ಕ್ಕೂ ಹೆಚ್ಚು ಮಂದಿ ನಾಪತ್ತೆ!

- Advertisement -
- Advertisement -

ಬೀಜಿಂಗ್: ಚೀನಾದ ಚಾಂಗ್‌ಕಿಂಗ್ ನಗರದಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ 8 ಜನರು ಸಾವನ್ನಪ್ಪಿದ್ದು, 34ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಸ್ಥಳೀಯ ಮಾಧ್ಯಮಗಳ ವರದಿಯ ಪ್ರಕಾರ, ಚೀನಾದ ಗುಡ್ಡಗಾಡು ಪ್ರದೇಶವೊಂದರಲ್ಲಿ ಈ ದುರಂತ ಸಂಭವಿಸಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಬೆಟ್ಟದ ಒಂದು ದೊಡ್ಡ ಭಾಗ ಕುಸಿದು ಕೆಳಗಿದ್ದ ವಸತಿ ಪ್ರದೇಶಗಳು ಮತ್ತು ಮನೆಗಳ ಮೇಲೆ ಬಿದ್ದಿದೆ. ಪರಿಣಾಮ ಹಲವು ಮನೆಗಳು ಮಣ್ಣಿನ ಅಡಿಯಲ್ಲಿ ಸಂಪೂರ್ಣವಾಗಿ ಹೂತುಹೋಗಿವೆ ಎನ್ನಲಾಗಿದೆ.

ನೂರಾರು ರಕ್ಷಣಾ ಸಿಬ್ಬಂದಿ, ಮಿಲಿಟರಿ ಪಡೆಗಳು ಮತ್ತು ಅಗ್ನಿಶಾಮಕ ದಳ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿವೆ. ಕುಸಿದು ಬಿದ್ದಿರುವ ಭಾರಿ ಪ್ರಮಾಣದ ಮಣ್ಣು ಮತ್ತು ಕಲ್ಲುಗಳನ್ನು ಬುಲ್ಡೋಜರ್‌ಗಳು ಹಾಗೂ ಆಧುನಿಕ ಯಂತ್ರಗಳನ್ನು ಬಳಸಿ ತೆರವು ಮಾಡಲಾಗುತ್ತಿದೆ. ಮಣ್ಣಿನ ಅಡಿಯಲ್ಲಿ ಇನ್ನೂ ಅನೇಕರು ಸಿಲುಕಿರುವ ಶಂಕೆಯಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯದೆ.

ಮಣ್ಣಿನಡಿ ಸಿಲುಕಿದ್ದ 18 ಜನರನ್ನು ರಕ್ಷಿಸಲಾಗಿದ್ದು, ಈ ಪೈಕಿ 8 ಮಂದಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇನ್ನು ಮತ್ತಷ್ಟು ಅನಾಹುತ ಸಂಭವಿಸದಂತೆ ತಡೆಯಲು ಘಟನೆ ನಡೆದ 1 ಕಿಲೋಮೀಟರ್ ವ್ಯಾಪ್ತಿಯಲ್ಲಿ ನೀರು, ವಿದ್ಯುತ್ ಮತ್ತು ಗ್ಯಾಸ್ ಸರಬರಾಜನ್ನು ಸ್ಥಗಿತಗೊಳಿಸಲಾಗಿದೆ.

ನಾಪತ್ತೆಯಾಗಿರುವ 34ಕ್ಕೂ ಹೆಚ್ಚು ಜನರನ್ನು ಹುಡುಕಲು ಡ್ರೋನ್ ಹಾಗೂ ಶ್ವಾನದಳ ಬಳಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಪ್ರದೇಶದಲ್ಲಿ ಮುಂದಿನ ಕೆಲವು ದಿನಗಳ ಕಾಲ ಮತ್ತಷ್ಟು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. .

- Advertisement -

Related news

error: Content is protected !!