- Advertisement -
- Advertisement -
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಾಡ ಗ್ರಾಮದ ಹುಬ್ಬಣಗೇರಿ ಪದವಿ ಪೂರ್ವ ಕಾಲೇಜಿನ ಬಳಿ ಸಮುದ್ರ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.

ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿ ಯಲ್ಲಿ ಪತ್ತೆಯಾಗಿದೆ. ಸ್ಥಳೀಯರು ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಅವರು ಪರಿಶೀಲನೆ ನಡೆಸಿದ್ದಾರೆ.

ಆಹಾರ ಹುಡುಕಿಕೊಂಡು ಬಂದ ಚಿರತೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಸಾವನ್ನಪ್ಪಿದೆ ಎಂದು ಶಂಕಿಸಲಾಗಿದೆ. ಅರಣ್ಯಾಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.


- Advertisement -








