Saturday, July 25, 2026
spot_imgspot_img
spot_imgspot_img

ಚಿತ್ರದುರ್ಗ: ರಸ್ತೆಬದಿ ನಿಂತಿದ್ದವರಿಗೆ ವಾಹನ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು!

- Advertisement -
- Advertisement -

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ರಸ್ತೆಬದಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಾಯಗೊಂಡಿರುವ ಘಟನೆ ನಡೆದಿದೆ.

ಇನ್ನೋವಾ ಕಾರು ಕೆಟ್ಟಿದ್ದ ಹಿನ್ನೆಲೆ ರಿಪೇರಿಗೆ ರಸ್ತೆ ಬದಿ ನಾಲ್ವರು ನಿಂತಿದ್ದರು. ಈ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿ ಬಳಿಕ ಅಪರಿಚಿತ ವಾಹನ ಸಮೇತ ಚಾಲಕ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈವರೆಗೆ ಮೃತರ ಗುರುತು ಪತ್ತೆ ಆಗಿಲ್ಲ ಎಂದು ವರದಿ ಮೂಲಕ ತಿಳಿದು ಬಂದಿದೆ.

- Advertisement -

Related news

error: Content is protected !!