- Advertisement -
- Advertisement -




ಮಂಗಳೂರು : ದಕ್ಷಿಣ ಕನ್ನಡದಲ್ಲಿ ಕಾಲರಾ ರೋಗದ ಭೀತಿ ಎದುರಾಗಿದೆ. ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರು ಗ್ರಾಮದ ವ್ಯಕ್ತಿಯೋರ್ವನಲ್ಲಿ ಸೋಂಕು ಪತ್ತೆಯಾಗಿದ್ದು ಆತಂಕ ಮನೆಮಾಡಿದೆ. ಉಡುಪಿ ಜಿಲ್ಲೆಯ ಹೊಸ್ಮಾರುವಿನ ಹೋಟೆಲ್ ನಿಂದ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದ್ದು ಈ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಹೈ ಅಲರ್ಟ್ ಆಗಿದೆ.
ಹೊಸ್ಮಾರುವಿನ ಹೋಟೆಲ್ನಿಂದ ಕಾಲರಾ ಸೊಂಕು ಸಾಮೂಹಿಕವಾಗಿ ಹರಡಿರುವ ಶಂಕೆ ವ್ಯಕ್ತವಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಅವರು ಮಾಹಿತಿ ನೀಡಿದ್ದಾರೆ.ಸೋಂಕು ಪತ್ತೆ ಹಿನ್ನಲೆ ದಕ್ಷಿಣ ಕನ್ನಡ ಆರೋಗ್ಯ ಇಲಾಖೆ ಅಲರ್ಟ್ ಆಗಿದ್ದು, ಮಂಗಳೂರು ನಗರದಲ್ಲಿ ವಿಶೇಷ ಮುತುವರ್ಜಿ ವಹಿಸಿದ್ದು ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೋಟೆಲ್ ಮಾಲೀಕರ ಜೊತೆ ವಿಶೇಷ ಸಭೆ ನಡೆಸಿದ್ದೇವೆ ಎಂದಿದ್ದಾರೆ.
- Advertisement -