Wednesday, May 15, 2024
spot_imgspot_img
spot_imgspot_img

ಕೇಂದ್ರ ಸರ್ಕಾರದಿಂದ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ

- Advertisement -G L Acharya panikkar
- Advertisement -

ಕೇಂದ್ರ ಸರ್ಕಾರ ಭಾರತದದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಅಧಿಸೂಚನೆ ಹೊರಡಿಸಿದೆ. ಈ ಮೂಲಕ ದೇಶಾದ್ಯಂತ ಸಿಎಎ ಪೌರತ್ವ ಕಾಯ್ದೆಯ ನಿಯಮಗಳ ಅಧಿಸೂಚನೆ ಹೊರಬಿದ್ದಿದೆ. 2019ರಲ್ಲಿ ಸಂಸತ್ತಿನಲ್ಲಿ ಸಿಎಎ ಕಾಯ್ದೆಗೆ ಅನುಮೋದನೆ ಸಿಕ್ಕರೂ, ಅಧಿಸೂಚನೆ ಹೊರಡಿಸಿರಲಿಲ್ಲ. ಪ್ರತಿಭಟನೆ, ವಿರೋಧಗಳಿಂದ ವಿಳಂಬವಾಗಿತ್ತು. ಇತ್ತೀಚೆಗೆ ಲೋಕಸಭಾ ಚುನಾವಣೆಗೆ ಮುನ್ನ ಸಿಎಎ ಜಾರಿಗೊಳಿಸುವುದಾಗಿ ಅಮಿತ್ ಶಾ ಪುನರುಚ್ಚರಿಸಿದ್ದರು. ಇದರಂತೆ ಸಿಎಎ ನಿಮಯಗಳ ಅಧಿಸೂಚನೆ ಹೊರಡಿಸಲಾಗಿದೆ.

ಗೃಹ ಸಚಿವಾಲಯ ಇಂದು ಪೌರತ್ವ ಕಾಯ್ದೆ 2019 (CAA-2019)ಅಡಿಯಲ್ಲಿನ ನಿಯಮಗಳ ಅಧಿಸೂಚನೆಯನ್ನು ಹೊರಡಿಸಿದೆ. ಪೌರತ್ವ ತಿದ್ದುಪಡಿ ಕಾಯ್ದೆ 2024ರ ನಿಯಮದ ಪ್ರಕಾರ CAA-2019 ಅಡಿಯಲ್ಲಿ ಅರ್ಹರಾಗಿರುವ ವ್ಯಕ್ತಿಗಳು ಭಾರತೀಯ ಪೌರತ್ವ ಮಂಜೂರಾತಿಗೆ ಅರ್ಜಿ ಸಲ್ಲಿಸಲು ಹಾಗೂ ಅರ್ಹರಿಗೆ ಪೌರತ್ವ ನೀಡಲು ಅನುವು ಮಾಡಿಕೊಡುತ್ತದೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಈ ಕಾನೂನಿನಂತೆ ಡಿಸೆಂಬರ್ 31, 2014ಕ್ಕಿಂತ ಮುಂಚೆ ಭಾರತಕ್ಕೆ ವಲಸೆ ಬಂದಿರುವ ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನದ ಹಿಂದು ಸಿಖ್, ಜೈನ, ಕ್ರೈಸ್ತ, ಬೌದ್ಧ ಮತ್ತು ಪಾರ್ಸಿ ಸಮುದಾಯದ ಮಂದಿಗೆ ಭಾರತದ ಪೌರತ್ವ ನೀಡಬಹುದಾಗಿದೆ.
ಸಿಎಎ ಅಡಿ ಪೌರತ್ವಕ್ಕೆ ಅರ್ಜಿ ಸಲ್ಲಿಸಲು ಮತ್ತು ಪೌರತ್ವ ಒದಗಿಸಲು ಆನ್‌ಲೈನ್ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಗೃಹ ಸಚಿವಾಲಯ ಚಿಂತನೆ ನಡೆಸುತ್ತಿದೆ

- Advertisement -

Related news

error: Content is protected !!