Monday, August 10, 2026
spot_imgspot_img
spot_imgspot_img

ಬೆಳಗಾವಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾತ್ರಿಯಿಡೀ ಠಾಣೆಯಿಂದ ಠಾಣೆಗೆ ಶಿಫ್ಟ್

- Advertisement -
- Advertisement -

ಬೆಳಗಾವಿ: ನಿನ್ನೆ ಸಂಸತ್‌ನಲ್ಲಿ ಆಡಳಿತ ಪಕ್ಷ ಮತ್ತು ವಿಪಕ್ಷಗಳ ಸಂಸದರ ನಡುವೆ ನಡೆದ ಜಟಾಜಟಿ ಮಾದರಿಯಲ್ಲೇ ರಾಜ್ಯದಲ್ಲೂ ಹೈಡ್ರಾಮಾ ನಡೆದಿದ್ದು, ಬೆಳಗಾವಿಯಲ್ಲಿ ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ರಾತ್ರಿಯಿಡೀ ಠಾಣೆಯಿಂದ ಠಾಣೆಗೆ ಶಿಫ್ಟ್ ಮಾಡಲಾಗಿದೆ. ನಂತರ ಗುರುವಾರ ರಾತ್ರಿಯೇ ಬಿಗಿ ಭದ್ರತೆಯಲ್ಲಿ ಅವರನ್ನು ಖಾನಾಪುರ ಠಾಣೆಯಿಂದ ಬೆಂಗಳೂರಿಗೆ ಬಿಗಿಭದ್ರತೆಯಲ್ಲಿ ಕರೆತರಲಾಗಿದ್ದು, ಇಂದು ಸಂಜೆಯೊಳಗೆ ಬೆಂಗಳೂರಿನ ಜನಪ್ರತಿನಿಧಿ ಕೋರ್ಟ್‌ಗೆ ಸಿಟಿ ರವಿಯನ್ನು ಪೊಲೀಸರು ಹಾಜರುಪಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.ಬೆಳಗಾವಿ ಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್ ಹಾಗೂ ಸಿಟಿ ರವಿ ನಡುವಣ ಜಟಾಪಟಿ ವಿಕೋಪಕ್ಕೆ ತಿರುಗಿ ಸಚಿವೆ ಮಾಡಿರುವ ಗಂಭೀರ ಆರೋಪ ಒಂದೆಡೆಯಾದರೆ, ಇದೀಗ ತಮ್ಮ ಮೇಲೆ ರಕ್ತ ಬರುವಂತೆ ಹಲ್ಲೆ ಮಾಡಿದ್ದಾರೆ. ಕೊಲೆಗೆ ಸಂಚು ಹೂಡಲಾಗಿದೆ ಎಂದು ಆರೋಪಿಸಿ ಸಿ.ಟಿ ರವಿ ಪ್ರತಿ ದೂರು ನೀಡಿದ್ದಾರೆ.ಸಚಿವೆ ಲಕ್ಷ್ಮೀ ಹೆಬ್ಬಾಳ್ಳರ್‌ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಸಿ.ಟಿ ರವಿ ವಿರುದ್ಧ ಗುರುವಾರ ದೂರು ದಾಖಲಿಸಿದ್ದರು. ಸಿ.ಟಿ ರವಿ ತಮ್ಮ ಕಡೆಗೆ ನುಗ್ಗಿ ಬಂದು 10 ಬಾರಿ ಆಕ್ಷೇಪಾರ್ಹ ಪದ ಬಳಸಿದ್ದಾರೆ. ಅಶ್ಲೀಲವಾಗಿ ಸನ್ನೆ ಮಾಡಿ, ಮಾನಭಂಗಕ್ಕೆ ಯತ್ನಿಸಿದ್ದಾರೆ ಎಂದು ದೂರು ಕೊಟ್ಟಿದ್ದರು. ಇದಾದ ಬೆನ್ನಲ್ಲೇ ಸುವರ್ಣಸೌಧದಲ್ಲಿ ಧರಣಿ ಕುಳಿತಿದ್ದ ಸಿ.ಟಿ ರವಿಯನ್ನು ಹೀರೇಬಾಗೇವಾಡಿ ಪೊಲೀಸರು ಬಲವಂತವಾಗಿ ಹೆಗಲ ಮೇಲೆ ಹೊತ್ತುಕೊಂಡು, ಜೀಪುಹತ್ತಿಸಿ ಕರೆದೊಯ್ದಿದ್ದರು. ಹೀರೇಬಾಗೇವಾಡಿ ಠಾಣೆಯಲ್ಲಿ ಕೆಲಹೊತ್ತು ಕೂರಿಸಿ ನಂತರ ನಂದಗಢ ಠಾಣೆಗೆ ಕರೆದೊಯ್ದಿದ್ದರು. ಮತ್ತೆ ಅಲ್ಲಿಂದ ಖಾನಾಪುರ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಬಂಧಿಸಿದ್ದರು. ಖಾನಾಪುರ ಠಾಣೆಯಲ್ಲಿ ಸಿ.ಟಿ ರವಿ ಅವರನ್ನು ಬಂಧಿಸಿಡಲಾಗಿತ್ತು. ಠಾಣೆ ಮುಂದೆ ಬಿಜೆಪಿ ಎಂಎಲ್ಸಿ ರವಿಕುಮಾ‌ರ್, ಸುಭಾಷ್ ಪಾಟೀಲ್, ಸಂಜಯ್ ಪಾಟೀಲ್‌, ಸೇರಿದಂತೆ ಮತ್ತಿತ್ತತರು ಸಿ.ಟಿ.ರವಿ ಬಂಧನ ಖಂಡಿಸಿ ಪ್ರತಿಭಟನೆ ಮಾಡಿದ್ದಾರೆ.ನಂತರ ವಿಪಕ್ಷ ನಾಯಕ ಆರ್.ಅಶೋಕ್, ಬಸನಗೌಡ ಪಾಟೀಲ್‌ ಯತ್ನಾಳ್‌, ಸುನೀಲ್ ಕುಮಾರ್, ಅರವಿಂದ ಬೆಲ್ಲದ್‌, ಮಾಜಿ ಸಚಿವ ಪ್ರಭು ಚೌಹಾಣ್ ಖಾನಾಪುರ ಪೊಲೀಸ್‌ ಠಾಣೆಗೆ ಲಗ್ಗೆ ಹಾಕಿದ್ದಾರೆ. ಆದರೆ ಠಾಣೆಯೊಳಗೆ ಯಾರನ್ನೂ ಬಿಡದ ಕಾರಣ ಭಾರಿ ಜಟಾಪಟಿ ನಡೆಯಿತು. ಪೊಲೀಸ್‌ ನಡೆಗೆ ಕೆರಳಿದ ಆರ್.ಅಶೋಕ್ ನಾನು ಸಹ ಹೋಂ ಮಿನಿಸ್ಟರ್ ಆಗಿ ಕೆಲಸ ಮಾಡಿದ್ದೇನೆ. ಇದೆಲ್ಲವೂ ನಡೆಯೋದಿಲ್ಲ, ನಿಮ್ಮನ್ನ ನೋಡಿಕೊಳೇನೆ ಎಂದು ಕಮಿಷನರ್‌ಗೆ ಎಚ್ಚರಿಕೆ ಕೊಟ್ಟಿದ್ದಾರೆ.

- Advertisement -

Related news

error: Content is protected !!