Monday, July 20, 2026
spot_imgspot_img
spot_imgspot_img

ಪ್ರೀತಿಸುವಂತೆ ಸಹಪಾಠಿಯಿಂದ ಒತ್ತಾಯ; ಮಹಡಿ ಮೇಲಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ!

- Advertisement -
- Advertisement -

ಬೀದರ್: ಪ್ರೀತಿಸುವಂತೆ ಸಹಪಾಠಿ ಒತ್ತಾಯಿಸಿದ್ದಕ್ಕೆ ಬೇಸತ್ತು ಶಾಲೆಯ ಮಹಡಿ ಮೇಲಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಬೀದರ್ ಜಿಲ್ಲೆಯ ಚಿಟಗುಪ್ಪಾ ತಾಲೂಕಿನ ಭೆಮಳಖೇಡ ಗ್ರಾಮದಲ್ಲಿ ನಡೆದಿದೆ.

ಭೆಮಳಖೇಡ ಗ್ರಾಮದ ಶಾಲೆಯೊಂದರಲ್ಲಿ ಹತ್ತನೇ ತರಗತಿ ಓದುತ್ತಿದ್ದ ಮದಿಯಾ ನಶೀರ್ ಪಾಷಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ.

ಸಹಪಾಠಿಯಿಂದ ಲವ್ ಮಾಡುವಂತೆ ಚುಡಾಯಿಸಿದಕ್ಕೆ ಹಾಗೂ ಪ್ರೀತಿಸುವಂತೆ ಒತ್ತಡ ಹಾಕಿದ್ದಕ್ಕೆ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಾಲಕಿಗೆ ಸಹಪಾಠಿ ಚುಡಾಯಿಸಿದ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈವರೆಗೂ ವಿದ್ಯಾರ್ಥಿನಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕುರಿತು ಭೆಮಳಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!