Saturday, June 13, 2026
spot_imgspot_img
spot_imgspot_img

ಸರ್ಕಾರಕ್ಕೆ 2 ವರ್ಷ – ಸಿಎಂಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದು ಕೊಟ್ಟ ಬಿಜೆಪಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ `ದಿವಾಳಿ ಮಾಡೆಲ್ ಆಫ್ ಕರ್ನಾಟಕ’ ಬಿರುದನ್ನು ನಾವು ನೀಡುತ್ತಿದ್ದೇವೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.ಬಿಜೆಪಿ ನಗರ ಕಾರ್ಯಾಲಯ ಬಾವುರಾವ್ ದೇಶಪಾಂಡೆ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ರಾಜ್ಯ ಸರ್ಕಾರ ದಿವಾಳಿಯಾಗಿದೆ.

ಸಾಲ ಪಡೆದು ಸಂಬಳ ಕೊಡುವಂಥ ಸ್ಥಿತಿ ಬಂದಿದೆ. ನಮ್ಮ ಡಿ.ಕೆ.ಶಿವಕುಮಾರಣ್ಣ ನಿನ್ನೆ ಇದನ್ನು ಸರಿಯಾಗಿ ಹೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಹಣ ಕೊಡಲು ನಿಮ್ಮಪ್ಪನ ಮನೆ ಗಂಟಾ ಎಂದು ಕೇಳಿದ್ದಾರೆ. ತಿಂಗಳಿಗೊಮ್ಮೆ 2 ಸಾವಿರ ಫಟಾಫಟ್ ಹಣ ಕೊಡುವುದಾಗಿ ರಾಹುಲ್ ಗಾಂಧಿ ಹೇಳಿದ್ದರು. ಇಲ್ಲಿ ಶಿವಕುಮಾರ್ ಕಟಾಕಟ್, ಯಾವಾಗ ಹಣ ಬರುತ್ತೋ ಆಗ ದುಡ್ಡು ಕೊಡುವುದಾಗಿ ಹೇಳಿದ್ದಾರೆ ಎಂದು ಗಮನ ಸೆಳೆದರು

- Advertisement -

Related news

error: Content is protected !!