Saturday, June 28, 2025
spot_imgspot_img
spot_imgspot_img

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: 11ಜನರು ಮೃತ್ಯು , 10 ಲಕ್ಷ ಪರಿಹಾರ ಘೋಷಿಸಿದ ಸಿಎಂ

- Advertisement -
- Advertisement -

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ವಿಜಯೋತ್ಸವ ಸಂದರ್ಭದಲ್ಲಿ ದೊಡ್ಡ ಪ್ರಮಾಣದ ದುರಂತ ಸಂಭವಿಸಿದೆ. ಇಲ್ಲಿ ಕಾಲ್ತುಳಿತಕ್ಕೆ ಒಳಗಾಗಿ 11ಜನರು ಮೃತಪಟ್ಟಿದ್ದಾರೆ. 47 ಮಂದಿ ಗಾಯಗೊಂಡಿದ್ದಾರೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಯುವ ವಯಸ್ಸಿನವರು. ನಾವು ಮೃತಪಟ್ಟವರ ಕುಟುಂಬದವರ ವಾರೀಸುದಾರರಿಗೆ ರೂ.10 ಲಕ್ಷ ಪರಿಹಾರವಾಗಿ ನೀಡಲಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಅವರು ದುರಂತದ ಕುರಿತು ತುರ್ತುಗೋಷ್ಟಿ ನಡೆಸಿದ ಸಿಎಂ, ಗಾಯಗೊಂಡವರಿಗೆ ಚಿಕಿತ್ಸೆ ವೆಚ್ಚವನ್ನು ಸರ್ಕಾರ ಭರಿಸಲಿದೆ. ಗಾಯಗೊಂಡವರು ಪ್ರಾಣಾಪಾಯಾದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.ಈ ದುರಂತದ ಬಗ್ಗೆ ಮ್ಯಾಜಿಸ್ಟ್ರೀಯಲ್ ತನಿಖೆಗೆ ಆದೇಶಿಸಿದ್ದೇವೆ. ತಪ್ಪಿತಸ್ಥರ ಮೇಲೆ ಸೂಕ್ತ ಕ್ರಮ ಜರುಗಿಸಲಾಗುವುದು. 15 ದಿನಗಳ ಒಳಗಾಗಿ ತನಿಖೆಯ ವರದಿಯನ್ನು ಸಲ್ಲಿಸಲು ಸೂಚನೆ ನೀಡಲಾಗಿದೆ ಎಂದರು.

- Advertisement -

Related news

error: Content is protected !!