Sunday, June 29, 2025
spot_imgspot_img
spot_imgspot_img

ಬಿಸಿಯೂಟ ಕಾರ್ಯಕರ್ತೆಯರಿಗೆ, ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ: ಬಜೆಟ್‌ ಮಂಡನೆಯ ವೇಳೆ ಸಿಎಂ ಘೋಷಣೆ

- Advertisement -
- Advertisement -

2025-26ನೇ ಸಾಲಿನ ಕರ್ನಾಟಕ ಬಜೆಟ್ ಮಂಡಿಸುತ್ತಿರುವ ಸಿದ್ದರಾಮಯ್ಯ 16ನೇ ಬಾರಿಗೆ ಬಜೆಟ್ ಮಂಡನೆ ಮಾಡುವ ಮೂಲಕ ದಾಖಲೆ ಸೃಷ್ಟಿಸಿದ್ದಾರೆ. ಕುವೆಂಪು ಅವರ ಕವನ ಹೇಳುವ ಮೂಲಕ ಕುಳಿತುಕೊಂಡೇ ಬಜೆಟ್ ಮಂಡಿಸುತ್ತಿರುವ ಸಿಎಂ ಸಿದ್ದರಾಮಯ್ಯ ಬಿಸಿಯೂಟ ಕಾರ್ಯಕರ್ತೆಯರಿಗೆ ಶುಭ ಸುದ್ದಿ ನೀಡಿದ್ದಾರೆ.

ರಾಜ್ಯಪಾಲರ ವಂದನಾ ನಿರ್ಣಯ ಚರ್ಚೆಯಲ್ಲಿ ಭರವಸೆ ನೀಡಿದಂತೆ ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಎಂ ಸಿದ್ದರಾಮಯ್ಯ ಸಿಹಿ ಸುದ್ದಿಯನ್ನು ನೀಡಿದ್ದು ಗೌರವಧನವನ್ನು ಹೆಚ್ಚಿಸುವುದಾಗಿ ಘೋಷಿಸಿದ್ದಾರೆ.

ಬಿಸಿಯೂಟ ಕಾರ್ಯಕರ್ತೆಯರಿಗೆ ನೀಡಲಾಗುವ ಗೌರವಧನವನ್ನು 1,000 ರೂ. ಹೆಚ್ಚಿಸುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದೇ ಸಂದರ್ಭದಲ್ಲಿ ಅತಿಥಿ ಶಿಕ್ಷಕರಿಗೂ ಗುಡ್ ನ್ಯೂಸ್ ನೀಡಿರುವ ಸಿದ್ದರಾಮಯ್ಯ, ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನು 2 ಸಾವಿರ ರೂ. ಹೆಚ್ಚಳ ಮಾಡುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!