Friday, April 26, 2024
spot_imgspot_img
spot_imgspot_img

ಬಿಜೆಪಿ ಕಾರ್ಯಕಾರಿಣಿ ಸಭೆ- ನಾಳೆ ಮಂಗಳೂರಿಗೆ ಸಿಎಂ ಬಿಎಸ್​​​ವೈ

- Advertisement -G L Acharya panikkar
- Advertisement -

ಮಂಗಳೂರು(ನ.3): ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಮಂಗಳೂರಿಗೆ ಆಗಮಿಸಲಿದ್ದಾರೆ.

ನವೆಂಬರ್ 5 ರಂದು ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು. ಈ ಸಭೆಯಲ್ಲಿ ಭಾಗವಹಿಸಲು ಒಂದು ದಿನ ಮುಂಚಿತವಾಗಿಯೇ ಮುಖ್ಯಮಂತ್ರಿಗಳು ಮಂಗಳೂರಿಗೆ ಆಗಮಿಸಲಿದ್ದಾರೆ.
ನಾಳೆ ರಾತ್ರಿ 7 ಗಂಟೆಗೆ ಮಂಗಳೂರಿಗೆ ಆಗಮಿಸಲಿರುವ ಅವರು ನಗರದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ನವೆಂಬರ್ 5 ರಂದು ಮಂಗಳೂರು ಕೊಡಿಯಾಲ್ ಬೈಲ್​ನಲ್ಲಿರುವ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ರಾಜ್ಯ ಬಿಜೆಪಿಯ ವಿಶೇಷ ಸಭೆಯನ್ನು ಉದ್ಘಾಟಿಸಲಿದ್ದಾರೆ.

ಬೆಳಗ್ಗೆ 11.30 ಕ್ಕೆ ಹೋಟೆಲ್ ಓಷಿಯನ್ ಪರ್ಲ್​ನಲ್ಲಿ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2.30 ಕ್ಕೆ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ವಿಶೇಷ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅದೇ ದಿನ ರಾತ್ರಿ 7.35 ಕ್ಕೆ ಮಂಗಳೂರು ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ತೆರಳಲಿದ್ದಾರೆ.

- Advertisement -

Related news

error: Content is protected !!