- Advertisement -
- Advertisement -
ಬೆಂಗಳೂರು: ಸಂಪುಟ ವಿಸ್ತರಣೆ ಕುರಿತಂತೆ ಚರ್ಚಿಸಲು ದೆಹಲಿಗೆ ಬರುವಂತೆ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬಿಜೆಪಿ ಹೈಕಮಾಂಡ್ ಸೂಚನೆ ನೀಡಿದೆ.

ರಾಜ್ಯ ಬಿಜೆಪಿ ಸರ್ಕಾರದಲ್ಲಿ ಸಂಪುಟ ವಿಸ್ತರಣೆ ಕುರಿತಂತೆ ದಿನೇದಿನೆ ಕುತೂಹಲ ಹೆಚ್ಚುತ್ತಿದೆ. ಈ ಮಧ್ಯೆ, ಬಿಜೆಪಿ ಹೈಕಮಾಂಡ್’ನಿಂದ ಸಿಎಂ ಯಡಿಯೂರಪ್ಪ ಅವರಿಗೆ ಆಹ್ವಾನ ಬಂದಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ. ಜ.16ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತಾ ಶಾ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಆ ವೇಳೆ ಸಂಪುಟ ಕುರಿತ ಚರ್ಚೆ ನಡೆಯಲಿದೆ ಎನ್ನಲಾಗಿತ್ತು.


- Advertisement -








