ಬೆಂಗಳೂರು: ವಿಶ್ವ ಮೀನುಗಾರಿಕೆ ಕೃಷಿ ದಿನಾಚರಣೆ ಅಂಗವಾಗಿ ಇಂದು ಮಾನ್ಯ ಮುಖ್ಯ ಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ರವರು ತಮ್ಮ ಗೃಹ ಕಚೇರಿ ಕೃಷ್ಣಾ ದಲ್ಲಿ ‘ಮೀನುಗಾರಿಕೆ ಇಲಾಖೆಯ ಕ್ರಿಯಾ ಯೋಜನೆ ‘ಯನ್ನು ಬಿಡುಗಡೆ ಗೊಳಿಸಿದರು.
ಮೀನುಗಾರಿಕೆಯಲ್ಲಿ ನಿರತರಾಗಿದ್ದ ವೇಳೆ ಮೃತಪಟ್ಟ ಮೀನುಗಾರರಿಗೆ ಸಂಕಷ್ಟ ಪರಿಹಾರ ನಿಧಿಯಿಂದ ಮಂಜೂರುಗೊಂಡ ತಲಾ 6 ಲಕ್ಷದ ಚೆಕ್ ಗಳನ್ನು ಸಾಂಕೇತಿಕವಾಗಿ ಇಬ್ಬರು ಮೀನುಗಾರರ ಕುಟುಂಬದ ಸದಸ್ಯರಿಗೆ ವಿತರಿಸಲಾಯಿತು.
ಮೀನುಗಾರಿಕೆ ಹಾಗೂ ಬಂದರು ಇಲಾಖೆಯು ಮೂಲಕ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಗೆ ಕಾರ್ಯೋನ್ಮುಖರಾಗಿರುವ ಮಾನ್ಯ ಮುಖ್ಯಮಂತ್ರಿಗಳಿಗೆ ಕರಾವಳಿ ಜಿಲ್ಲೆಗಳ ಮೀನುಗಾರರ ಪರವಾಗಿ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಯವರು ಬೆಳ್ಳಿಯ ಮೀನು ಸ್ಮರಣಿಕೆ ನೀಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಂದಾಯ ಸಚಿವರಾದ ಆರ್ ಅಶೋಕ್, ನಗರಾಭಿವೃದ್ಧಿ ಸಚಿವರಾದ ಭೈರತಿ ಬಸವರಾಜ್, ಮೀನುಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್, ಉಡುಪಿ ಶಾಸಕರಾದ ಕೆ ರಘುಪತಿ ಭಟ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷರಾದ ಯಶ್ ಪಾಲ್ ಸುವರ್ಣ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.