- Advertisement -
- Advertisement -






ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ಅವರು ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡಿದ್ದರು. ಕಾರ್ಯಕ್ರಮದಲ್ಲಿ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು.
- Advertisement -








