- Advertisement -
- Advertisement -
ಬೆಂಗಳೂರು : ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆ ಬೆಂಗಳೂರಿನ ವಿಧಾನಸೌಧದ ಮುಂದೆ ಅತೀ ಉದ್ದದ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.
ಚಾಮರಾಜನಗರದಿಂದ ಬೀದರ್ವರೆಗೂ 2,500 ಕಿಲೋಮೀಟರ್ ಮಾನವ ಸರಪಳಿ ರಚನೆ ಮಾಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಇಡೀ ಕರ್ನಾಟಕ ರಾಜ್ಯದಲ್ಲಿ ಅಲ್ಲಲ್ಲಿ ಮಾನವ ಸರಪಳಿ ರಚಿಸಿ ಆಚರಣೆ ಮಾಡಲಾಗುತ್ತಿದೆ. ಬೆಂಗಳೂರಿನಲ್ಲಿ ಪ್ರಜಾಪ್ರಭುತ್ವದ ಉಳಿವು, ಸಮಾಜದ ನಿರ್ಮಾಣಕ್ಕಾಗಿ ಕಾರ್ಯಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.
ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಶಾಸಕ ರಿಜ್ವಾನ್ ಹರ್ಷದ್, ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ಸಭಾಪತಿ ಬಸವರಾಜ ಹೊರಟ್ಟಿ, ಡೆಪ್ಯುಟಿ ಸ್ಪೀಕರ್ ರುದ್ರಪ್ಪಲಮಾಣಿ, ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
- Advertisement -