- Advertisement -
- Advertisement -
ರಾಜ್ಯದಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಹೀಗಾಗಿ ಎಲ್ಲ ಜಿಲ್ಲೆಗಳ ಕೊರೊನಾ ನಿಯಂತ್ರಣದ ಪರಿಸ್ಥಿತಿ ತಿಳಿಯಲು ಜಿಲ್ಲಾಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಲು ಸಿಎಂ ಬಿ.ಎಸ್.ಯಡಿಯೂರಪ್ಪ ನಿರ್ಧರಿಸಿದ್ದಾರೆ. ಸದ್ಯ ಹೋಂ ಕ್ವಾರಂಟೈನ್ ನಲ್ಲಿರುವ ಸಿಎಂ, ಸೋಮವಾರ ಮನೆಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಎಲ್ಲ ಡಿಸಿಗಳ ಜತೆ ಮಾತುಕತೆ ನಡೆಸಲಿದ್ದಾರೆ. ಎಲ್ಲ ಜಿಲ್ಲೆಗಳ ಸದ್ಯದ ಕೊರೊನಾ ನಿಯಂತ್ರಣದ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಜಿಲ್ಲೆಗಳಲ್ಲಿ ಕೊರೊನಾ ಸೋಂಕಿನ ಪ್ರಮಾಣ ಎಷ್ಟಿದೆ. ಸೋಂಕು ನಿಯಂತ್ರಣದ ಬಗ್ಗೆ ಕೈಗೊಂಡಿರುವ ಕ್ರಮದ ಬಗ್ಗೆ ಚರ್ಚೆ ನಡೆಸಲಿದ್ದಾರೆ. ಇನ್ನು ಸಭೆ ಬಳಿಕ ಸಿಎಂ ಮಹತ್ವದ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.

- Advertisement -