Monday, May 20, 2024
spot_imgspot_img
spot_imgspot_img

ಕೊರೊನಾ ನಿಯಂತ್ರಣ: ರಾಜ್ಯ ಸರ್ಕಾರದ ಕ್ರಮಕ್ಕೆ ಕೇಂದ್ರದ ತಂಡ ಮೆಚ್ಚುಗೆ…

- Advertisement -G L Acharya panikkar
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳ ತಂಡ, ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೈಗೊಂಡ ಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ.ಕೇಂದ್ರ ಆರೋಗ್ಯ ಸಚಿವಾಲಯದ ಅಪರ ಕಾರ್ಯದರ್ಶಿ ಆರ್ತಿ ಅಹುಜಾ ಹಾಗೂ ತುರ್ತು ವೈದ್ಯಕೀಯ ಸ್ಪಂದನಾ ಕೇಂದ್ರದ ನಿರ್ದೇಶಕ ಡಾ. ರವೀಂದ್ರನ್ ಅವರು ರಾಜ್ಯಕ್ಕೆ ಎರಡು ದಿನಗಳ ಭೇಟಿಯ ಸಂದರ್ಭದಲ್ಲಿ ಸಿಎಂ ಬಿಎಸ್ ವೈ ಅವರನ್ನು ಭೇಟಿಯಾಗಿ ಚರ್ಚಿಸಿದರು. ಕೊರೊನಾದಿಂದ ಉಂಟಾಗುವ ಮರಣ ಪ್ರಮಾಣ ಹಾಗೂ ರೋಗ ಲಕ್ಷಣ ಇರುವ ಸೋಂಕಿತರಿಗೆ ಸರಿಯಾಗಿ ಚಿಕಿತ್ಸಾ ಸೌಲಭ್ಯ ಒದಗಿಸಬೇಕು. ಇದರ ಜತೆಗೆ ಕಂಟೇನ್ಮೆಟ್ ವಯಗಳಲ್ಲಿ ಕಟ್ಟುನಿಟ್ಟಿನ ನಿಯಮ ಪಾಲನೆಯಾಗಬೇಕು ಎಂದು ಕೇಂದ್ರದ ತಂಡ ಸರ್ಕಾರಕ್ಕೆ ಸಲಹೆ ನೀಡಿದೆ.

ಇನ್ನು ರಾಜ್ಯದಲ್ಲಿ ಕೋವಿಡ್ ಸೋಂಕಿತರ ಚಿಕಿತ್ಸೆಗೆ ಕೈಗೊಳ್ಳುತ್ತಿರುವ ಕ್ರಮಗಳ ಕುರಿತು ಅಧಿಕಾರಿಗಳು ಮಾಹಿತಿ ನೀಡಿದರು. ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳು ಮತ್ತು ತಾಲ್ಲೂಕು ಆಸ್ಪತ್ರೆಗಳಲ್ಲಿ ಹೈ ಫ್ಲೋ ಆಕ್ಷಿಜನ್ ವ್ಯವಸ್ಥೆ ಅಳವಡಿಸಲಾಗುತ್ತಿದೆ. ಆಗಸ್ಟ್ 15 ರೊಳಗಾಗಿ ಈ ಪ್ರಕ್ರಿಯೆ ಪೂರ್ಣಗೊಳ್ಳಲಿವೆ ಎಂದು ವಿವರ ನೀಡಿದ್ರು.ಸಭೆಯಲ್ಲಿ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -

Related news

error: Content is protected !!