Thursday, April 25, 2024
spot_imgspot_img
spot_imgspot_img

*ಸರಕಾರ ಮತ್ತು ರೈತಮುಖಂಡರ ಸಭೆ ವಿಫಲ* *ರಾಜ್ಯಾದ್ಯಂತ ಮತ್ತೆ ಬಂದ್ ಗೆ ನಿರ್ಧಾರ*

- Advertisement -G L Acharya panikkar
- Advertisement -

ಬೆಂಗಳೂರು ಭೂ-ಸುಧಾರಣೆ ಮತ್ತು ಎಪಿಎಂಸಿ ಖಾಯ್ದೆ ತಿದ್ದುಪಡಿ ಹಿಂಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ರೈತ ಸಂಘಟನೆಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಈ ಹಿನ್ನೆಲೆ ಪ್ರತಿಭಟನೆ ಕೈಬಿಡುವಂತೆ ಸಿಎಂ ಬಿಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ರೈತ ಸಂಘಟನೆಗಳ ಮುಖಡರೊಂದಿಗೆ ನಡೆಸಿದ ಸಭೆ ವಿಫಲವಾಗಿದೆ.

ಸಿಎಂ ಬಿಎಸ್​​ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಜಮೀನು ಹೊಂದುವ ಮಿತಿ ಕಡಿಮೆ ಮಾಡುವ ಬಗ್ಗೆ ಮಾತ್ರ ಸಿಎಂ ರೈತ ಮುಖಂಡರಿಗೆ ಭರವಸೆ ನೀಡಿದರು. ಈ ಮೂಲಕ ಮುಖಂಡರ ಮನವೊಲಿಕೆಗೆ ಪ್ರಯತ್ನಿಸಿದರು.

ಆದರೆ ರೈತ ನಾಯಕರ ಬೇಡಿಕೆಗೆ ಮುಖ್ಯಮಂತ್ರಿಗಳಿಂದ ಸ್ಪಷ್ಟ ಭರವಸೆ ಸಿಗದ ಕಾರಣ ಸಭೆ ವಿಫಲವಾಗಿದ್ದು, ಸೆ.28ಕ್ಕೆ ಕರ್ನಾಟಕ ಬಂದ್​​ ನಡೆಸಲು ರೈತ ನಾಯಕರು ನಿರ್ಧರಿಸಿದ್ದಾರೆ. ಸಭೆಯಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ, ಕಂದಾಯ ಸಚಿವ ಆರ್​.ಅಶೋಕ್​ ಹಾಗೂ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್​ ಸೇರಿದಂತೆ ಹಲವರು ಭಾಗಿಯಾಗಿದ್ದರು.

ರೈತಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್​ ಮಾತನಾಡಿ, ಯಡಿಯೂರಪ್ಪನವರು ಬಿಲ್​ಗಳನ್ನು ವಾಪಸ್ ಪಡೆಯುವ ಬಗ್ಗೆ ಯಾವುದೇ ಭರವಸೆ ನೀಡಲಿಲ್ಲ. ಅವರು ಮೋದಿ ಮಾತು ಮೀರಲು ಸಿದ್ಧರಿಲ್ಲ, ನಾವು ಸೋಮವಾರ ಬಂದ್​ನಡೆಸುತ್ತೇವೆ.  ಎಲ್ಲರೂ ಬಂದ್​ಗೆ ಬೆಂಬಲ ನೀಡಬೇಕು ಎಂದಿದ್ದಾರೆ.

- Advertisement -

Related news

error: Content is protected !!