ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ನಗರದಲ್ಲಿ ಜುಲೈ 14ರ ರಾತ್ರಿಯಿಂದ ಲಾಕ್ ಡೌನ್ ಜಾರಿಯಾಗುತ್ತಿರುವ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ತಮ್ಮ ನಿವಾಸದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಲಾಕ್ ಡೌನ್ ನಿಯಮಾವಳಿ ಬಗ್ಗೆ ಗಂಭೀರ ಚರ್ಚೆ ನಡೆದಿದೆ.
ಒಂದು ವಾರ ಘೋಷಣೆಯಾಗಿರುವ ಲಾಕ್ ಡೌನ್ ನಲ್ಲಿ ನಿಯಮಾವಳಿಗಳು ಹೇಗಿರಬೇಕು. ಹಳೆಯ ನಿಯಮಾವಳಿ ಮುಂದುವರಿಸಬೇಕಾ ಅಥವಾ ಇದಕ್ಕೆ ಹೊಸ ನಿಯಮಾವಳಿಗಳನ್ನು ಸೇರಿಸಬೇಕಾ ಎಂಬುದರ ಬಗ್ಗೆ ಚರ್ಚೆ ನಡೆದಿದೆ.
ಇನ್ನು ನಗರದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ಒಂದು ವಾರ ಲಾಕ್ ಡೌನ್ ಸಾಕಾ ಅಥವಾ ಮುಂದುರಿಸಬೇಕಾ ಎಂಬುದರ ಬಗ್ಗೆಯೂ ಮಾತುಕತೆ ನಡೆದಿದೆ ಎನ್ನಲಾಗಿದೆ. ಇದರೊಂದಿಗೆ ವೆಂಟಿಲೇಟರ್, ಔಷಧಿ ಸಂಬಂಧಿತ ಕೈಗಾರಿಕೆಗಳಿಗೆ ಲಾಕ್ ಡೌನ್ ಮಾಡುವುದು ಬೇಡ ಎಂದು ಸಭೆಯಲ್ಲಿ ನಿರ್ಧರಿಸಲಾಗಿದೆ.
ಇನ್ನುಳಿದ ಜಿಲ್ಲೆಗಳ ಲಾಕ್ ಡೌನ್ ಗಳ ಬಗ್ಗೆ ನಾಳೆ ನಿರ್ಧಾರ:
ಈಗಾಗಲೇ ಸಿಲಿಕಾನ್ ಸಿಟಿಯಲ್ಲಿ ಲಾಕ್ ಡೌನ್ ಘೋಷಣೆಯಾಗಿದ್ದು, ಮಂಗಳವಾರ ರಾತ್ರಿಯಿಂದ ಜಾರಿಯಾಗಲಿದೆ. ಇದೇ ರೀತಿ ಉಳಿದ ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಾಗಬೇಕೆ ಎಂಬುದರ ಬಗ್ಗೆ ಚರ್ಚೆ ನಡೆಸಲು ನಾಳೆ ಸಿಎಂ ಎಲ್ಲ ಜಿಲ್ಲಾಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.