- Advertisement -
- Advertisement -
ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಪಾಸಿಟಿವ್ ಬಂದ ಬೆನ್ನಲ್ಲೇ ಸಿಎಂ ಗೃಹಕಚೇರಿಯ 11 ಮಂದಿ ಸಿಬ್ಬಂದಿಗೆ ಕೊರೊನಾ ತಗುಲಿರುವುದು ದೃಢವಾಗಿದೆ. ಹೀಗಾಗಿ ಇಂದು ಸೋಂಕಿತ 11 ಮಂದಿ ಸಿಬ್ಬಂದಿಯನ್ನು ಕೋವಿಡ್ ಕೇರ್ ಸೆಂಟರ್ ಗೆ ಸ್ಥಳಾಂತರಿಸಲಾಗಿದೆ. ಮಾದವರದ ಬಳಿಯಿರುವ ಅಂತಾರಾಷ್ಟ್ರೀಯ ಪ್ರದರ್ಶನ ಕೇಂದ್ರದಲ್ಲಿರುವ ಕೋವಿಡ್ ಕೇರ್ ಸೆಂಟರ್ ನಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಸ್ವಯಂ ಕ್ವಾರಂಟೈನ್ ಗೆ ಒಳಗಾದ ಡಿಸಿಎಂ, ಗೃಹಸಚಿವ, ಕಮಿಷನರ್:
ಸಿಎಂ ಗೆ ಕೊರೊನಾ ಪಾಸಿಟಿವ್ ಬಂದ ಬಳಿಕ ಡಿಸಿಎಂ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಈ ಮೂವರು ಸಿಎಂ ಜತೆ ಹೆಚ್ಚಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಹಿನ್ನಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ ಎನ್ನಲಾಗಿದೆ. ಎಲ್ಲ ಕಾರ್ಯಕ್ರಮಗಳಲ್ಲಿ ಸಿಎಂ ಸಾಮಾಜಿಕ ಅಂತರ ಕಾಯ್ದುಕೊಂಡಿದ್ದರು. ಆದ್ರೂ ಸಿಎಂಗೆ ಕೊರೊನಾ ತಗುಲಿರುವುದು ಅಚ್ಚರಿಗೆ ಕಾರಣವಾಗಿದೆ.
- Advertisement -