- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗೃಹಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಹೀಗಾಗಿ ಸಿಎಂ ಬಿಎಸ್ ವೈ ಅವರಿಗೆ ಕೊರೊನಾ ಭೀತಿ ಎದುರಾಗಿದೆ. ಈ ಹಿನ್ನಲೆಯಲ್ಲಿ ಸಿಎಂ ಇಂದಿನಿಂದ 5 ದಿನಗಳ ಕಾಲ ಸೆಲ್ಫ್ ಹೋಂ ಕ್ವಾರಂಟೈನ್ ನಲ್ಲಿ ಇರಲಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಿಎಂ ಬಿಎಸ್ ವೈ, ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೊರೊನಾ ಸೋಂಕು ಬಂದಿದೆ. ಹೀಗಾಗಿ ನಾನು ಇಂದಿನಿಂದ 5 ದಿನಗಳ ಕಾಲ ಮನೆಯಿಂದಲೇ ಕೆಲಸ ನಿರ್ವಹಿಸಲಿದ್ದೇನೆ. ವಿಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ಕೊಡಲಿದ್ದೇನೆ ಎಂದು ತಿಳಿಸಿದ್ದಾರೆ.ಯಾರೂ ಆತಂಕಪಡುವ ಅಗತ್ಯವಿಲ್ಲ. ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಹಾಗೂ ಸರ್ಕಾರದ ನಿಯಮ ಪಾಲಿಸಿ. ಸಾಮಾಜಿಕ ಅಂತರ ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿ. ಕೊರೊನಾ ನಿಯಂತ್ರಣಕ್ಕೆ ಸಹಕರಿಸಿ ಎಂದು ಮನವಿ ಮಾಡಿದ್ದಾರೆ.
- Advertisement -