- Advertisement -
- Advertisement -
ಬೆಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಗುರುಪುರದ ಬಂಗ್ಲೆ ಗುಡ್ಡೆಯಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣದಲ್ಲಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೇ ಸಂತ್ರಸ್ತರ ಸ್ಥಳಾಂತರಕ್ಕೆ ಸೂಚನೆಯನ್ನು ನೀಡಿದ್ದಾರೆ.
ಭಾರೀ ಮಳೆಯಿಂದಾಗಿ ಗುರುಪುರ ಸಮೀಪದಲ್ಲಿ ನಡೆದ ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 19 ಮನೆಗಳಲ್ಲಿರುವ 118 ಮಂದಿಯನ್ನು ಸ್ಥಳಾಂತರಗೊಳಿಸಲಾಗಿದ್ದು, ಉಳಿದ 60 ಮನೆಗಳಿಂದ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸುವ ಕಾರ್ಯವನ್ನು ಮಾಡಲಾಗುತ್ತಿದೆ.
- Advertisement -