ವರದಿ: ವಿ ಟಿವಿ ನ್ಯೂಸ್
ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ. ವಿದ್ಯಾರ್ಥಿಗಳ ಆನ್ ಲೈನ್ ಶಿಕ್ಷಣ, ಕೊರೊನಾ ಚಿಕಿತ್ಸೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಈ ಸಭೆ ಕರೆದಿದ್ದಾರೆ ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 25 ಸಾವಿರ ಗಡಿ ದಾಟಿದ ಹಿನ್ನಲೆಯಲ್ಲಿ ಶನಿವಾರವೂ ಕೂಡ ಲಾಕ್ ಡೌನ್ ಮಾಡಲು ಈ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ಕೋವಿಡ್ ಕೇರ್ ಸೆಂಟರ್ ಗಳಿಗೆ ಸಿಎಂ ಭೇಟಿ:
ಕೊರೊನಾ ರಣಕೇಕೆ ಹಾಕುತ್ತಿರುವ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿರುವ ಎಲ್ಲ ಕೋವಿಡ್ ಆಸ್ಪತ್ರೆಗಳಿಗೆ ಇಂದು ಸಿಎಂ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ತುಮಕೂರು ರಸ್ತೆ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿನ 10 ಸಾವಿರ ಬೆಡ್ ಗಳುಳ್ಳ ಕೋವಿಡ್ ಕೇರ್ ಸೆಂಟರ್ ಗೂ ಸಿಎಂ ಭೇಟಿ ನೀಡಲಿದ್ದಾರೆ. ಕೋವಿಡ್ ಸೋಂಕಿತರ ಚಿಕಿತ್ಸೆ, ಮೂಲ ಸೌಕರ್ಯದ ಬಗ್ಗೆ ಅಧಿಕಾರಿಗಳ ಜತೆ ಮಾತುಕತೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.