Sunday, June 14, 2026
spot_imgspot_img
spot_imgspot_img

 *ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಕಠಿಣ ಕ್ರಮ: ಸಿಎಂ ಬಿಎಸ್ ವೈ*

- Advertisement -
- Advertisement -

ಬೆಂಗಳೂರು: ಡಿ.ಜಿ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

 ಡಿ.ಜಿ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಿಡಿಗೇಡಿಗಳು ಶಾಸಕ ಅಖಂಡ ಶ್ರೀನಿವಾಸ ಅವರ ಮನೆ ಹಾಗು ಪೋಲೀಸ್ ಠಾಣೆ ಮೇಲೆ ದಾಳಿ, ಗಲಭೆ ನಡೆಸಿರುವುದು ಖಂಡನೀಯ. ಈಗಾಗಲೇ ದುಷ್ಕರ್ಮಿಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದ್ದು ಸರ್ಕಾರ ದಾಂಧಲೆ ಹತ್ತಿಕ್ಕಲು ಎಲ್ಲ ರೀತಿಯ ಕ್ರಮ ಕೈಗೊಂಡಿದೆ. 

ನಿನ್ನೆ ರಾತ್ರಿ ನಡೆದ ಗಲಭೆಯಲ್ಲಿ ಪತ್ರಕರ್ತರು, ಪೋಲೀಸರು, ಸಾರ್ವಜನಿಕರ ಮೇಲೆ ಹಲ್ಲೆ ಮಾಡಿರುವುದು ಅಕ್ಷಮ್ಯ. ಇಂತಹ ಪ್ರಚೋದನೆ, ಪುಂಡಾಟಗಳನ್ನು ಸರ್ಕಾರ ಕಿಂಚಿತ್ತೂ ಸಹಿಸುವುದಿಲ್ಲ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ನಿಶ್ಚಿತ. ಜನರು ಈ ಸಂದರ್ಭದಲ್ಲಿ ಆವೇಶಕ್ಕೆ ಒಳಗಾಗದೆ ಸಂಯಮದಿಂದ ವರ್ತಿಸಬೇಕೆಂದು ಮನವಿ ಮಾಡುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

- Advertisement -

Related news

error: Content is protected !!