- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ಅವರಿಗೆ ಒಂದು ವಾರಗಳ ಕಾಲ ಆಸ್ಪತ್ರೆಯಲ್ಲೇ ಚಿಕಿತ್ಸೆ ನೀಡುವಂತೆ ಬಿಎಸ್ ವೈ ಕುಟುಂಬಸ್ಥರು ವೈದ್ಯರಿಗೆ ಮನವಿ ಮಾಡಿದ್ದಾರೆ. ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ನಿನ್ನೆ ತಡರಾತ್ರಿ ಸಿಎಂ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಸಂಜೆ ವೇಳೆಗೆ ಅವರು ಡಿಸ್ಚಾರ್ಜ್ ಆಗಲಿದ್ದಾರೆ ಎಂದು ತಿಳಿದುಬಂದಿತ್ತು.ಆದರೆ ಆಸ್ಪತ್ರೆಯಲ್ಲಿ ಅವರಿಗೆ ಒಂದು ವಾರ ಚಿಕಿತ್ಸೆ ನೀಡಿ ಎಂದು ಕುಟುಂಬಸ್ಥರು ಮನವಿ ಮಾಡಿದ್ದಾರೆ.
ಸಿಎಂ ಬಿಎಸ್ ವೈ ಸದಾ ಕಾರ್ಯೋನ್ಮುಖರಾಗಿರಲು ಬಯಸುತ್ತಾರೆ. ಹೀಗಾಗಿ ಅವರನ್ನು ಹಿಡಿದಿಡುವುದು ಕಷ್ಟ ಸಾಧ್ಯ. ಈ ಹಿನ್ನಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣ ಗುಣಮುಖರಾಗಿ ಹಿಂತಿರುಗುವುದೇ ಉತ್ತಮ ಎಂದು ಕುಟುಂಬಸ್ಥರು ಅಭಿಪ್ರಾಯಪಟ್ಟಿದ್ದಾರೆ.
- Advertisement -