- Advertisement -
- Advertisement -



ಬೆಳ್ತಂಗಡಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಪಡೆದು ವಿಶೇಷ ಸೇವೆ ಸಲ್ಲಿಸಿದರು.
ಮೊದಲು ಕ್ಷೇತ್ರದ ವತಿಯಿಂದ ಮುಖ್ಯಮಂತ್ರಿಯವರನ್ನು ಡಿ.ಹರ್ಷೇಂದ್ರ ಕುಮಾರ್ ಸ್ವಾಗತಿಸಿದರು. ಭವ್ಯ ಮೆರವಣಿಗೆಯೊಂದಿಗೆ ಕ್ಷೇತ್ರಕ್ಕೆ ಬರಮಾಡಿಕೊಳ್ಳಲಾಯಿತು. ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಸಿಎಂ ಜತೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಮಹದೇವಪ್ಪ, ಬೈರತಿ ಸುರೇಶ್, ಗೋವಿಂದ ರಾಜು ಸಾಥ್ ಭಾಗಿಯಾಗಿದ್ದರು.
- Advertisement -








